ವಿಜಯಪುರ: ಸಿಂದಗಿ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು 31,088 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮತ್ತೊಂದೆಡೆ ಜೆಡಿಎಸ್‌ಗೆ ಭಾರಿ ಮುಖಭಂಗವಾಗಿದೆ.
ರಮೇಶ ಭೂಸನೂರ ಅವರು 93,380 ಮತಗಳನ್ನು ಪಡೆದುಕೊಂಡಿದ್ದಾರೆ. ಇನ್ನು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರು 62,292 ಮತಗಳನ್ನು ಪಡೆದುಕೊಂಡರೆ, ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ 4,321 ಮತಗಳನ್ನು ಪಡೆಯಲಷ್ಟೇ ಶಕ್ತವಾದರು. ಇದರಿಂದಾಗಿ ಜೆಡಿಎಸ್ ಅಭ್ಯರ್ಥಿ ಸೇರಿದಂತೆ ಕಣದಲ್ಲಿದ್ದ ಇತರೆ ನಾಲ್ವರು ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.
PublicNext
02/11/2021 01:44 pm