ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಹಾನಗಲ್ ಕ್ಷೇತ್ರದಲ್ಲಿ ಸೋತಿದೆ. ಈ ಸೋಲು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸೋಲು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಜೆಡಿಎಸ್ ವಿರುದ್ಧ ಟ್ವೀಟ್ ಮೂಲಕ ಟೀಕಾ ಪ್ರಹಾರ ನಡೆಸಿರುವ ಸಿದ್ದರಾಮಯ್ಯ, 'ನಾನು ಮೊದಲೇ ಹೇಳಿದ್ದೆ. ಕೋಮುವಾದಿ ಪಕ್ಷದ ಜೊತೆ ಸೇರಿದ್ದಾರೆಂದು, ಈಗ ಎರಡೂ ಕಡೆ ಠೇವಣಿ ಕಳೆದುಕೊಂಡಿದ್ದಾರೆ. ನಾನು ಜೆಡಿಎಸ್ ಬಗ್ಗೆ ಮಾತನಾಡಲ್ಲ. ಮುಂದಿನ ಚುನಾವಣೆಯಲ್ಲೂ ಇದೇ ಆಗಲಿದೆ ಎಂದು ಭವಿಷ್ಯ ನುಡಿದರು. ಇನ್ನು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಅವರ ಮಗ ಆ್ಯಕ್ಟಿವ್ ಆಗಿ ಕ್ಯಾಂಪೇನ್ ಮಾಡಿದ್ರು. ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದು ಎಫೆಕ್ಟ್ ಆಗಿಲ್ಲ. ಸಿಂದಗಿಯಲ್ಲಿ ಅಭ್ಯರ್ಥಿ ಸ್ಟ್ರಾಂಗ್ ಇದ್ದರು. ಆದರೆ ಕಾರ್ಯಕರ್ತರ ಹೊಂದಾಣಿಕೆ ಇರಲಿಲ್ಲ, ಹಾಗಂತ ಅಲ್ಲಿ ಕಾರ್ಯಕರ್ತರು ಹೇಳುತ್ತಿದ್ದರು ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಟೀಕೆ ಮಾಡಿದ್ದಾರೆ.
PublicNext
03/11/2021 07:38 am