ಚಿತ್ರದುರ್ಗ : ಸಿಂದಗಿಯಲ್ಲಿ ನಡೆದ ಉಪ ಚುನಾವಣೆಯಲ್ಲಿ ನಾವು 30 ಸಾವಿರಕ್ಕೂ ಹೆಚ್ಚು ಮತಗಳ ಬಹಳ ಅಂತರದಿಂದ ಗೆಲುವನ್ನು ಸಾಧಿಸಿದ್ದೇವೆ, ಆದರೆ ಹಾನಗಲ್ ನಲ್ಲಿ ಹಿನ್ನೆಡೆ ಆಗಿದ್ದರ ಬಗ್ಗೆ ಕಾರ್ಯಕರ್ತರ ಜೊತೆ ಸಮಾಲೋಚನೆ ಮಾಡುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
ಹಿನ್ನೆಡೆ ಏನು ಎಂದು ತಿಳಿಯಲು ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಚರ್ಚೆ ಮಾಡಿ ಕಾರಣವನ್ನು ತಿಳಿದುಕೊಳ್ಳುತ್ತೇವೆ ಎಂದರು. ಅವರು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಸಾಣೇಹಳ್ಳಿಯಲ್ಲಿ ನಡೆಯುತ್ತಿರುವ ನಾಟಕೋತ್ಸವದಲ್ಲಿ ಭಾಗವಹಿಸುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದರು. ಕೋವಿಡ್ ಕಾರಣದಿಂದಾಗಿ ನಾಟಕೋತ್ಸವ ಕಾರ್ಯಕ್ರಮವನ್ನು ಮಾಡಲಾಗಿರಲಿಲ್ಲ ಆದ್ದರಿಂದ ಈ ಬಾರಿ ವಿಜೃಂಭಣೆಯಿಂದ ಮಾಡುತ್ತಿದ್ದೇವೆ ಎಂದು ಹೇಳಿದರು.
PublicNext
03/11/2021 11:45 am