ಹುಬ್ಬಳ್ಳಿ: ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ ಏಳು ರೂಪಾಯಿ ಇಳಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಆರ್ಥಿಕ ತಜ್ಞರು ದರ ಇಳಿಕೆಯಿಂದ ಸರಬರಾಜು ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ನೀಡಿದ್ದಾರೆ. ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಇಳಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ 2100 ಕೋಟಿ ಹೊರೆಯಾಗಲಿದೆ. ಅದನ್ನೆಲ್ಲ ಪರಿಶೀಲಿಸಿ ಇಂದು ಸಂಜೆಯಿಂದಲೇ ಬೆಲೆ ಇಳಿಕೆ ಜಾರಿಯಾಗಲಿದೆ ಎಂದರು.
ಇನ್ನು ಜನವರಿ 26 ರಿಂದ ರಾಜ್ಯಾದ್ಯಂತ ಜನಸೇವಕ ಯೋಜನೆ ಜಾರಿಯಾಗಲಿದೆ. ಹೈಕಮಾಂಡ್ ನಿಂದ ನನಗೆ ಯಾವುದೇ ಬುಲಾವ್ ಬಂದಿಲ್ಲ. ನಾನು ದೆಹಲಿಗೆ ಹೋಗುವುದಿಲ್ಲ. ಸಚಿವ ಸಂಪುಟದ ವಿಸ್ತರಣೆ ಸದ್ಯಕ್ಕಿಲ್ಲ ಎಂದರು.
ಬಿಟ್ ಕ್ವಾಯಿನ್ ಪ್ರಕರಣ ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಆಗ್ರಹ ವಿಚಾರವಾಗಿ ಮಾತನಾಡುವ ಅವರು, ಈ ಬಗ್ಗೆ ಈಗಾಗಲೇ ಪ್ರತಿಕ್ರಿಯೆ ನೀಡಿದ್ದೇನೆ ಎಂದರು.
PublicNext
04/11/2021 02:52 pm