ಹುಬ್ಬಳ್ಳಿ: ಡಿ ಕಂಟ್ರೋಲ್ ಆಗಿದ್ದ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯನ್ನು ಕೇಂದ್ರ ಸರ್ಕಾರ ಜನಕ್ಕೆ ತೊಂದರೆಯಾಗಬಾರದೆಂದು ದೃಷ್ಟಿಯಿಂದ ಕಡಿಮೆಗೊಳಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಅಂತರಾಷ್ಟ್ರೀಯ ಬೆಲೆಗಳನ್ನು ಗಮನದಲ್ಲಿಟ್ಟುಕೊಂಡು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಜನಕ್ಕೆ ತೊಂದರೆಯಾಗಬಾರದೆಂಬ ದೃಷ್ಟಿಯಿಂದ ರಾಜ್ಯದಲ್ಲಿ ಒಟ್ಟಾರೆಯಾಗಿ ಪೆಟ್ರೋಲ್ 12, ಡಿಸೇಲ್ ಮೇಲಿನ 17 ರೂಪಾಯಿ ಕಡಿಮೆ ಮಾಡಿದ್ದೇವೆ ಎಂದರು.
ರಾಜ್ಯ ಸರ್ಕಾರ ನೂರು ದಿನ ಪೂರೈಸಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಉತ್ತಮ ಕೆಲಸ ಮಾಡುತ್ತಾ ಇದ್ದೆ. ಈ ಸರ್ಕಾರ ಪೂರ್ಣ ಅವಧಿ ಮುಗಿಸುವುದರಲ್ಲಿ ಎರಡು ಮಾತಿಲ್ಲ. ಮುಂದಿನ ಅವಧಿ ಕೂಡಾ ಬಿಜೆಪಿ ಸರ್ಕಾರದ ಅವಧಿಯಾಗಲಿದೆ ಎಂದರು.
PublicNext
04/11/2021 02:56 pm