ಉಡುಪಿ: ಉಪಚುನಾವಣೆ ಫಲಿತಾಂಶ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ,
ಚುನಾವಣೆಯ ಫಲಿತಾಂಶವನ್ನು ಈಗ ವಿಶ್ಲೇಷಣೆ ಮಾಡಲು ಸಾಧ್ಯವಿಲ್ಲ.ಎರಡೂ ಪಕ್ಷಗಳು ತಲಾ ಒಂದೊಂದು ಸ್ಥಾನಗಳನ್ನು ಗೆದ್ದಿವೆ.
ಪ್ರಜಾತಂತ್ರದಲ್ಲಿ ಜನರ ತೀರ್ಪನ್ನು ನಾವು ಸ್ವಾಗತಿಸಬೇಕು.ಹೋಲಿಕೆ ಮಾಡಲು ಹೋದರೆ ಸಿಂದಗಿಯಲ್ಲಿ ನಾವು ದೊಡ್ಡ ಅಂತರದಲ್ಲಿ ಗೆದ್ದಿದ್ದೇವೆ.ಉಪಚುನಾವಣೆಯಲ್ಲಿ ಇಷ್ಟು ದೊಡ್ಡ ಪ್ರಮಾಣದ ಅಂತರ ಸುಲಭದ ವಿಚಾರವಲ್ಲ.ಓರ್ವ ಸಾಮಾನ್ಯ ಅಭ್ಯರ್ಥಿಯನ್ನು ಇಟ್ಟುಕೊಂಡು ಗೆದ್ದಿದ್ದೇವೆ.ಸಿಂದಗಿಯಲ್ಲಿ ಹೈ-ಫೈ ಅಭ್ಯರ್ಥಿ ಕಣದಲ್ಲಿ ಇರಲಿಲ್ಲ.ಈ ಫಲಿತಾಂಶ ನೋಡಿ ಒಬ್ಬ ವ್ಯಕ್ತಿ ಅಥವಾ ಸರ್ಕಾರದ ಬಗ್ಗೆ ನಿರ್ಧಾರ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
PublicNext
04/11/2021 03:09 pm