ದೆಹಲಿ: ಇಂದು ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿಯ ಸುದೀರ್ಘ ಅವಧಿಯ ಅಧ್ಯಕ್ಷ ಎಲ್.ಕೆ.ಅಡ್ವಾಣಿ 94ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಹಲವು ನಾಯಕರು ಅಡ್ವಾಣಿ ಅವರಿಗೆ ಶುಭಾಶಯ ಕೋರಿದ್ದಾರೆ.
ಇದೇ ವೇಳೆ ಪಕ್ಷಕ್ಕೆ ಅವರು ನೀಡಿದ ಕೊಡುಗೆಗಳನ್ನು ಶ್ಲಾಘಿಸಿದ್ದಾರೆ. “ಗೌರವಾನ್ವಿತ ಅಡ್ವಾಣಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ. ಜನರನ್ನು ಸಬಲೀಕರಣಗೊಳಿಸಲು ಮತ್ತು ನಮ್ಮ ಸಾಂಸ್ಕೃತಿಕ ಹೆಮ್ಮೆಯನ್ನು ಹೆಚ್ಚಿಸಲು ಅವರ ಹಲವಾರು ಪ್ರಯತ್ನಗಳಿಗಾಗಿ ರಾಷ್ಟ್ರವು ಅವರಿಗೆ ಋಣಿಯಾಗಿದೆ. ಅವರ ವಿದ್ವತ್ಪೂರ್ಣ ಅನ್ವೇಷಣೆಗಳು ಮತ್ತು ಶ್ರೀಮಂತ ಬುದ್ಧಿಶಕ್ತಿಗಾಗಿ ಅವರು ವ್ಯಾಪಕವಾಗಿ ಗೌರವಿಸಲ್ಪಡುತ್ತಾರೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
PublicNext
08/11/2021 06:45 pm