ಮೈಸೂರು: ಬಿಟ್ ಕಾಯಿನ್ ಕೇಸ್‌ನಲ್ಲಿ ಆಡಳಿತ ಪಕ್ಷ, ವಿರೋಧ ಪಕ್ಷದ ಯಾರೇ ಇರಲಿ. ಮೊದಲು ಆ ಬಗ್ಗೆ ವಿಳಂಬ ಮಾಡದೇ ತನಿಖೆ ಮಾಡಲಿ. ಈ ಪ್ರಕರಣದ ಬಗ್ಗೆ ಚುರುಕು ತನಿಖೆ ಇನ್ನೂ ಯಾಕೆ ಆರಂಭವಾಗಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಕೇಸ್ ಬಗ್ಗೆ ನನ್ನ ಬಳಿಯೇ ಸರ್ಕಾರ ಸಾಕ್ಷಿ ಕೇಳುತ್ತಿದೆ.
ಅದರ ಸಾಕ್ಷಿ ಹುಡುಕಬೇಕಾದವರು, ತನಿಖೆ ಮಾಡಬೇಕಾದವರು ತನಿಖಾಧಿಕಾರಿಗಳು. ಆ ಕೆಲಸವನ್ನು ಸರ್ಕಾರ ಮಾಡಿಸಲಿ.
ನಾನು ಈ ಕೇಸ್‌ನ ಬಗ್ಗೆ ಸಾಕ್ಷಿ ಹುಡುಕುತ್ತಿದ್ದೇನೆ. ನನ್ನ ಬಳಿ ಇರುವ ಮಾಹಿತಿಯನ್ನು ಅಗತ್ಯವಿದ್ದರೆ ಕೋರ್ಟ್‌ಗೆ ಕೊಡುತ್ತೇವೆ.
ಈ ಬಾರಿಯ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸಲು ಇನ್ನು ಸಾಕ್ಷಿಗಳು ಬೇಕಿವೆ. ನಾನು ನನ್ನ ಬಳಿ ಇರುವ ವಿಚಾರವನ್ನ ಹಂಚಿಕೊಳ್ಳುತ್ತಿದ್ದೇನೆ ಅಷ್ಟೇ. ಎಂದು ಸಿದ್ದರಾಮಯ್ಯ ಹೇಳಿದರು.
ಇನ್ನು ಮೇಕೆದಾಟು ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಸರ್ಕಾರ ಕಾಮಗಾರಿ ಆರಂಭಿಸಲು ವಿಳಂಬ ಮಾಡುತ್ತಿದೆ.
ಕಾಂಗ್ರೆಸ್ ನವರು ತಡವಾಗಿ ಡಿಪಿಆರ್ ಮಾಡಿದ್ದಾರೆ ಎಂಬ ಸಿಎಂ ಹೇಳಿಕೆಯಲ್ಲಿ ಅರ್ಥವಿಲ್ಲ. ನಾವು ಈಗ ಕಾಮಗಾರಿ ಆರಂಭಿಸಿ ಎಂದು ಕೇಳುತ್ತಿದ್ದೇವೆ. ಒತ್ತಡ ಹೇರಲೇಬೇಕಾದ ಸನ್ನಿವೇಶದಲ್ಲೇ ಇದ್ದೇವೆ. ಹಾಗಾಗಿ ಒತ್ತಡ ಹೇರಿದ್ದೇವೆ.
ನಾವು ಒತ್ತಡ ಹೇರದಿದ್ದರೆ ಇವರು ಕೆಲಸ ಆರಂಭಿಸುವುದಿಲ್ಲ. ಸರ್ಕಾರದ ಮೇಲೆ ಒತ್ತಡ ಹೇರದಿದ್ದರೆ ಇವರು ಕೆಲಸ ಆರಂಭಿಸುವುದಿಲ್ಲ. ಕೋರ್ಟ್ ಅಡ್ಡಿ ಇದೆ ಎಂಬುದೆಲ್ಲ ಸುಳ್ಳು ಕೇಂದ್ರದಿಂದ ಒಪ್ಪಿಗೆ ಪಡೆದು ತುರ್ತಾಗಿ ಯೋಜನೆ ಆರಂಭಿಸಬೇಕು ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
PublicNext
09/11/2021 01:22 pm