ನರಗುಂದ : ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಚೆನ್ನಮ್ಮ ನಮ್ಮ ಹೆಮ್ಮೆಯ ಪ್ರತೀಕ ಮುಂಬೈ ಕರ್ನಾಟಕ ಹೆಸರು ಬದಲಾವಣೆ ಮಾಡಿ ಕಿತ್ತೂರು ಕರ್ನಾಟಕ ಎಂದು ಘೋಷಿಸಿರುವುದು ಅತ್ಯಂತ ಸ್ವಾಗತಾರ್ಹ ಎಂದು ಸಚಿವ ಸಿ.ಸಿ ಪಾಟೀಲ್ ಹೇಳಿದ್ದಾರೆ.
ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂಬೈ ಕರ್ನಾಟಕ ಹೆಸರು ತೆಗೆದು ಹಾಕಿ ರಾಣಿ ಚೆನ್ನಮ್ಮಳ ಕರ್ಮ ಭೂಮಿಯಾದ ಕಿತ್ತೂರಿನ ಹೆಸರಿನಲ್ಲಿ ಕಿತ್ತೂರು ಕರ್ನಾಟಕ ಎಂದು ಘೋಷಿಸಲಾಗಿದೆ. ನಿನ್ನೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಇದು ಸಂತಸದಾಯಕ ವಿಚಾರ ಎಂದರು.
ಇನ್ನು ಮಹದಾಯಿ ಯೋಜನೆ ಕಾಮಗಾರಿ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿ.ಸಿ ಪಾಟೀಲ್, ಮಹದಾಯಿಗಾಗಿ ನಮ್ಮ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಈ ಕುರಿತಾಗಿ ಕೋರ್ಟ್ ಕೆಲಸಗಳು ಬಾಕಿ ಇವೆ. ಈ ಎಲ್ಲ ಪ್ರಕ್ರಿಯೆ ಪೂರ್ಣಗೊಂಡ ನಂತರ ಮಹದಾಯಿ ನೀರು ಮಲಪ್ರಭಾ ನದಿಗೆ ಜೋಡಣೆ ಮಾಡುತ್ತೇವೆ. ಈ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಪ್ರಬುದ್ಧತೆಯಿಂದ ಕೆಲಸ ಮಾಡುತ್ತಿದೆ ಎಂದಿದ್ದಾರೆ.
PublicNext
09/11/2021 01:40 pm