ಬೆಂಗಳೂರು: ವಿಧಾನ ಪರಿಷತ್ ನ ಒಟ್ಟು 25 ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.
ಡಿಸೆಂಬರ್ 10 ಕ್ಕೆ ಮತದಾನ ನಡೆಯಲಿದೆ. ರಾಜ್ಯದ 20 ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದೆ.
ನಾಮಪತ್ರ ಸಲ್ಲಿಸಲು ನ. 23 ಕೊನೆ ದಿನ. ನ. 24ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ನ. 26 ಕಡೆ ದಿನವಾಗಿರಲಿದೆ. ಡಿ. 10ರಂದು ಬೆಳಗ್ಗೆ 8ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದ್ದು, ಡಿ. 14ರಂದು ಫಲಿತಾಂಶ ಹೊರಬೀಳಿದೆ.
PublicNext
09/11/2021 02:33 pm