ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಷ್ಟ್ರೀಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಮ್ರನ್ ಪ್ರತಪ್ಗರ್ಹಿ ಅವರು ಅಬ್ದುಲ್ ಜಬ್ಬಾರ್ ಅವರನ್ನು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಸದ್ಯ ರಾಜ್ಯ ಘಟಕದ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಅವರು 10 ವರ್ಷಗಳ ಕಾಲ ದಾವಣಗೆರೆ ಜಿಲ್ಲಾ ಅಧ್ಯಕ್ಷರಾಗಿ, ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು.
ಜಬ್ಬಾರ್ ಅವರು ಇದೇ ನವೆಂಬರ್ 16 ರಂದು ಅರಮನೆ ಮೈದಾನದ ನಲಪಾಡ್ ಪೆವಿಲಿಯನ್ ನಲ್ಲಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ಈ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ಪಕ್ಷದ ನಾಯಕರು, ಕಾರ್ಯಕರ್ತರು ಆಗಮಿಸಲಿದ್ದಾರೆ. ಈ ಬಗ್ಗೆ ಶಾಸಕ ಎನ್.ಎ. ಹ್ಯಾರಿಸ್ ಹಾಗೂ ಅಬ್ದುಲ್ ಜಬ್ಬರ್ ಜಂಟಿಯಾಗಿ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಘೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
PublicNext
09/11/2021 06:46 pm