ನವದೆಹಲಿ: ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್ ನಾಯಕರು ಶಾಮೀಲು ಆಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.
ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆರೋಪದ ವಿಚಾರವಾಗಿ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, 'ಪ್ರಿಯಾಂಕ್ ಖರ್ಗೆ ಹೇಳಿಕೆಗಳಿಗೆಲ್ಲಾ ನಾನು ಪ್ರತಿಕ್ರಿಯಿಸಲ್ಲ. ಪಾಪ ಪ್ರಿಯಾಂಕ್ ಸರಿಯಾದ ಸಂಪೂರ್ಣ ಮಾಹಿತಿ ತರಿಸಿಕೊಳ್ಳಲಿ. ದಂಧೆಯಲ್ಲಿ ಕಾಂಗ್ರೆಸ್ ನಾಯಕರ ಹೆಸರುಗಳಿವೆ, ಆ ಬಗ್ಗೆ ಅವರು ಮೊದಲು ಚಿಂತನೆ ಮಾಡಿಕೊಳ್ಳಲಿ' ಎಂದು ತಿರುಗೇಟು ಕೊಟ್ಟಿದ್ದಾರೆ.
ಬಿಟ್ ಕಾಯಿನ್ ದಂಧೆಯ ಬಗ್ಗೆ ಕೇಳಿಬಂದಾಗಲೇ ಪ್ರತಿಕ್ರಿಯಿಸಿದ್ದ ಸಿಎಂ ಬೊಮ್ಮಾಯಿ, "ಬಿಜೆಪಿ ಸರ್ಕಾರ ಈ ಪ್ರಕರದಲ್ಲಿ ಯಾರನ್ನೂ ರಕ್ಷಿಸಲು ನೋಡುವುದಿಲ್ಲ. ನಿಷ್ಪಕ್ಷಪಾತ ತನಿಖೆ ನಡೆಸುತ್ತದೆ, ಬಿಟ್ ಕಾಯಿನ್ ದಂಧೆ, ಡ್ರಗ್ಸ್ ದಂಧೆಯ ವಿರುದ್ಧ ಸಮರ ಸಾರಿದ್ದೇ ಬಿಜೆಪಿ ಸರ್ಕಾರ. ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಟ್ ಕಾಯಿನ್ ದಂಧೆಯ ಆರೋಪಿಗಳನ್ನು ರಕ್ಷಿಸಿತ್ತು" ಎಂದು ಆರೋಪಿಸಿದ್ದರು.
PublicNext
10/11/2021 03:38 pm