ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾದ ಬಳಿಕ ನೇತ್ರದಾನ ಮಾಡಿದರು. ಬಳಿಕ ಅವರ ಅಭಿಮಾನಿಗಳು ಸಹಿತ ಸಾವಿರಾರು ಮಂದಿ ನೇತ್ರದಾನ ಮಾಡಲು ಮುಂದಾಗಿದ್ದಾರೆ. ಸದ್ಯ ನಗರದ ಮಿಂಟೋ ಆಸ್ಪತ್ರೆಗೆ ತೆರಳಿದ ಶಾಸಕ ಜಮೀರ್ ಅಹಮ್ಮದ್ ಖಾನ್ ನೇತ್ರದಾನಕ್ಕೆ ಸಹಿ ಹಾಕಿದ್ದಾರೆ.
ನಿನ್ನೆ ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆ ಅಭಿಮಾನಿಗಳಿಗಾಗಿ ಅರಮನೆ ಮೈದಾನದಲ್ಲಿ ಅನ್ನಸಂತರ್ಪಣೆ ಜೊತೆಗೆ ನೇತ್ರದಾನ ಮತ್ತು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಈ ವೇಳೆ ಬರೋಬ್ಬರಿ 3,100ಕ್ಕೂ ಹೆಚ್ಚು ಅಭಿಮಾನಿಗಳು ನೇತ್ರದಾನಕ್ಕೆ ಅರ್ಜಿ ಹಾಕಿದ್ದಾರೆ.
PublicNext
10/11/2021 05:47 pm