ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳೇ ಸ್ಪಷ್ಟನೆ ನೀಡಲಿ: ಜಿ.ಪರಮೇಶ್ವರ ಸವಾಲು

ಹುಬ್ಬಳ್ಳಿ: ಬಿಟ್ ಕಾಯಿನ್‌ನಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದಾರೆಂದು ಯಾರೋ ಹೇಳಿದ್ದಾರೆ. ಆದರೆ ಈ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಲಿ. ಪ್ರಿಯಾಂಕಾ ಖರ್ಗೆ ಹೇಳಿದ್ದಕ್ಕೆ ನಾನು ಸಹಮತ ವ್ಯಕ್ತಪಡಿಸಿಸುತ್ತೆನೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದರು.

ನಗರದಲ್ಲಿಂದು ಕಾಂಗ್ರೆಸ್ ಕಛೇರಿಯಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ದಲಿತ ಸಿಎಂ ವಿಚಾರವಾಗಿ ಸಾರ್ವಜನಿಕವಾಗಿ ಚರ್ಚೆ ಮಾಡಿಲ್ಲ, ಮಾಡುವುದಿಲ್ಲ. 113 ಕ್ಷೇತ್ರದಲ್ಲಿ ಗೆದ್ದ ನಂತರ ಆ ಬಗ್ಗೆ ಚರ್ಚೆ ಮಾಡಲಾಗುತ್ತದೆ. ನಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದ ಮೇಲೆ ಈ ಬಗ್ಗೆ ತೀರ್ಮಾನ ತೆಗೆದು ಕೊಳ್ಳಲಾಗುತ್ತದೆ ಎಂದರು.

ದಲಿತ ಸಿಎಂ ಬಗ್ಗೆ ಹೈಕಮಾಂಡ‌ ನಿರ್ಧಾರ ಮಾಡುತ್ತದೆ. ನಾವು ಬಹಿರಂಗವಾಗಿ ಚರ್ಚೆ ರೂಪದಲ್ಲಿ ಇದನ್ನು ತೆಗೆದುಕೊಂಡು ಹೋಗುವುದಿಲ್ಲ. ದಲಿತ ಎಂಬ ಹೆಸರಿನಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದ ಅವರು, ಹೊಟ್ಟೆ ಪಾಡಿಗಾಗಿ ಕೆಲವರೂ ಬಿಜೆಪಿಗೆ ಹೋಗಿದ್ದಾರೆಂಬ ಸಿದ್ದರಾಮಯ್ಯ ಹೇಳಿಕೆಯನ್ನ ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಸಿದ್ದರಾಮಯ್ಯ ಅವರು ಈಗಾಗಲೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದು ಅವರು ಹೇಳಿದರು.

ಇವತ್ತು ಕರ್ನಾಟಕದಲ್ಲಿ ದುರಾಡಳಿ ನಡೆಯುತ್ತಿದೆ. ಯಾವುದೇ ಇಲಾಖೆಗೆ ಹೋದರು ಅಲ್ಲಿ ಭ್ರಷ್ಟಾಚಾರ ಇದೆ. ವಿಧಾನಸೌದದಲ್ಲಿ ಯಾವುದೇ ಕೆಲಸ ಆಗಬೇಕಾದರೇ ಪರ್ಸೆಂಟೆಜ್ ಕೊಟ್ಟರೆ ಮಾತ್ರ ಕೆಲಸ ಆಗುತ್ತದೆ. ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಿಂದ ತುಂಬಿದೆ. ಪೆಟ್ರೋಲ್ ಮತ್ತು ಡಿಸೇಲ್ ನಿಂದ ಹಣದ ಲೆಕ್ಕ ಕೊಡಬೇಕು. ಇಲ್ಲಿಯವರೆಗೆ ಎಷ್ಟು ಹಣ ಸಂಗ್ರಹ ಆಗಿದೆ ಈ ಬಗ್ಗೆ ಲೆಕ್ಕ ‌ಕೊಡಲಿ. ಸುಮ್ಮನೆ ಜನರಿಗೆ ಮೋಸ ಮಾಡಿ, ಸುಳ್ಳು ಹೇಳುವ ಕೆಲಸವನ್ನ ಮಾಡ್ತಾ ಇದ್ದಾರೆ ಎಂದು ಬೊಮ್ಮಾಯಿ ವಿರುದ್ಧ ಕಿಡಿಕಾರಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ ಹೆಚ್ಚಾಗಿದೆ, ಇದನ್ನು ಕಡಿಮೆ ಮಾಡುವವರು ಯಾರು..? ಇದನ್ನ ನಿಯಂತ್ರಣ ಮಾಡಲಿಕ್ಕೆ ನಿಮ್ಮಂದ ಸಾಧ್ಯವಾಗಿಲ್ಲ ಏಕೆ..? ಎಂದು ಪ್ರಶ್ನಿಸಿದರು.

Edited By : Manjunath H D
PublicNext

PublicNext

10/11/2021 07:02 pm

Cinque Terre

50.8 K

Cinque Terre

0

ಸಂಬಂಧಿತ ಸುದ್ದಿ