ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಬುಧವಾರ ಮುಂಬೈನ ಹರ್‌ಕಿಶನ್‌ದಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
61ರ ಹರೆಯದ ಉದ್ಧವ್ ಠಾಕ್ರೆ ಅವರು ಕುತ್ತು ಹಾಗೂ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಎರಡು- ಮೂರು ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಇರಲಿದ್ದು, ಶಸ್ತ್ರಚಿಕಿತ್ಸೆ ಕೂಡ ನಡೆಯಲಿದೆ ಎಂಬುದು ತಿಳಿದುಬಂದಿದೆ.
"ಅಗತ್ಯವಿದ್ದಲ್ಲಿ" ತಾವು ಶಸ್ತ್ರಚಿಕಿತ್ಸೆಗೆ ಒಳಗಾಗಬಹುದು ಎಂದು ಸ್ವತಃ ಸಿಎಂ ಉದ್ಧವ್ ಠಾಕ್ರೆ ಮಂಗಳವಾರ ಸುಳಿವು ನೀಡಿದ್ದರು. ಇದೀಗ ಕತ್ತು ಹಾಗೂ ಬೆನ್ನುನೋವು ಅಧಿಕಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಅವರಿಗೆ ಸಣ್ಣ ಶಸ್ತ್ರಚಿಕಿತ್ಸೆ ಮಾಡುವ ಸಾಧ್ಯತೆ ಇದ್ದು, ಆ ಕುರಿತ ಖಚಿತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.
PublicNext
10/11/2021 07:30 pm