ಮೈಸೂರು: ಬೊಮ್ಮಾಯಿ ಅವರು ಒನಕೆ ಓಬ್ಬವ ಜಯಂತಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರೇ ನೀವು ಮಾಡಿದ್ದೇನು? ಓಬವ್ವನಂತ ವೀರ ವನಿತಾ ಮಹಿಳೆಯನ್ನು ಮೋಸದಿಂದ ಕೊಂದ. ಹೈದರಾಲಿಯ ಮಗನ ಜಯಂತಿಯನ್ನ ನೀವು ಮಾಡಿದ್ರಿ. ಮೈಸೂರು ಮಹಾರಾಜರಿಗೆ ಮೋಸ ಮಾಡಿದ ಟಿಪ್ಪುವಿನ ಜಯಂತಿ ನೀವು ಮಾಡಿದಿರಿ. ಮದಕರಿ ನಾಯಕನಿಗೆ ವಿಷ ಹಾಕಿ ಕೊಂದ ಟಿಪ್ಪು ಜಯಂತಿ ಮಾಡಿದ್ದು ನಿಮ್ಮ ಸಾಧನೆ. ನಿಮ್ಮಿಂದ ಬಸವರಾಜ ಬೊಮ್ಮಾಯಿ ಅವರು ಅಭಿವೃದ್ಧಿ ಪಾಠ ಕಲಿಯಬೇಕಾಗಿಲ್ಲ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಮ್ಮನ್ನೆ ಸೋಲಿಸಿದವರನ್ನು ನೀವೆ ಮನಸಾರೆ ಹಾಡಿ ಹೊಗಳುವ ಪರಿಸ್ಥಿತಿ ಬಂದಿದೆ. ಬೊಮ್ಮಾಯಿ ಅವರು ನೂರು ದಿನಗಳಲ್ಲಿ ಜನರ ಮನೆ ಮನ ತಲುಪಿದ್ದಾರೆ. ಉಪ ಚುನಾವಣೆಯಲ್ಲಿನ ಒಂದು ಸೋಲಿಗೆ ಬೇರೆ ಬೇರೆ ಕಾರಣ ಇರುತ್ತವೆ. ಅದು ರಾಜಕೀಯದ ಏಟು, ಒಳ ಏಟು, ತಂತ್ರ ಎಲ್ಲವು ಇರುತ್ತೆ. ನಂಜನಗೂಡು ಗುಂಡ್ಲುಪೇಟೆಯಲ್ಲಿ ಗೆದ್ದ ಕಾಂಗ್ರೆಸ್. ಮುಂದಿನ ಚುನಾವಣೆಯಲ್ಲಿ ಏನಾಯ್ತು ಏನಾದ್ರಿ? ಎಂದು ಪ್ರಶ್ನಿಸಿದ್ದಾರೆ.
ನಿಮಗೆ ಈಗಾಗಲೇ ಖಚಿತವಾಗಿದೆ. ಬೊಮ್ಮಾಯಿ ಅವರೇ 2023ಕ್ಕೂ ಮುಖ್ಯಮಂತ್ರಿ ಆಗೋದು ಎಂದು ಹಾಗಾಗಿ ಬೊಮ್ಮಾಯಿ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡ್ತಿದ್ದೀರಿ. ಮೊದಲು ಈ ರೀತಿ ತಂತ್ರಗಾರಿಕೆಯನ್ನ ಮಾಡೋದು ಬಿಡಿ ಎಂದಿದ್ದಾರೆ.
PublicNext
11/11/2021 09:56 pm