ಬೆಂಗಳೂರು : ದೆಹಲಿ ಪ್ರವಾಸ ಮುಗಿಸಿ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಇನ್ನು ರಾಷ್ಟ್ರ ರಾಜಧಾನಿಯಿಂದ ಮರಳಿದ ಬಳಿಕ ಆರ್.ಟಿ.ನಗರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ದೆಹಲಿ ಪ್ರವಾಸ ಯಶಸ್ವಿಯಾಗಿದೆ ಎರಡು ದೃಷ್ಟಿಯಿಂದ ರಾಜ್ಯಕ್ಕೆ ಯಶಸ್ಸು ಸಿಕ್ಕಿದೆ.
ಒಂದು ನಮ್ಮ ರಾಜ್ಯಕ್ಕೆ ಬೇಕಾಗಿರುವ ಕಲ್ಲಿದ್ದಲು ಒಡಿಶಾದಲ್ಲಿ ಉಪಯೋಗಿಸಲಾಗುತ್ತಿದೆ. ಹಾಗಾಗಿ ಮಹಾರಾಷ್ಟ್ರದಿಂದ ಹೆಚ್ಚುವರಿ ಕಲ್ಲಿದ್ದಲು ನೀಡುತ್ತಾರೆ. ಬರುವ ದಿನಗಳಲ್ಲಿ ಕಲ್ಲಿದ್ದಲು ಸಮಸ್ಯೆ ಉಂಟಾಗುವುದಿಲ್ಲ ಎನ್ನುವ ನಂಬಿಕೆ ಇದೆ. ಹಾಗೆಯೇ ಎರಡನೇಯದ್ದಾಗಿ ಆಹಾರ ನಾಗರಿಕ ಪೂರೈಕೆ ಇಲಾಖೆ ಗೆ ಸಂಬಂಧಿಸಿದಂತೆ ತುಂಬಾ ಬೇಡಿಕೆಗಳಿತ್ತು ಸುಮಾರು 2100 ಕೋಟಿ ಅನುದಾನ ಬಿಡುಗಡೆ ಆಗಬೇಕಿತ್ತುಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ ಎಂದಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರನ್ನು ಭೇಟಿ ಮಾಡಿದೆ. ಒಟ್ಟಾರೆ ದೆಹಲಿ ಪ್ರವಾಸ ಬಹಳ ಯಶಸ್ವಿಯಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ನಾವು 100 ದಿನಗಳಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ ಯೋಜನೆಗಳ ಬಗ್ಗೆ ವಿವರಣೆ ಪಡೆದುಕೊಂಡಿದ್ದಾರೆ ಎಂದರು.
PublicNext
11/11/2021 10:42 pm