ನವದೆಹಲಿ: 1947ರಲ್ಲಿ ಸಿಕ್ಕಿದ್ದು ಭಿಕ್ಷೆ. ದೇಶಕ್ಕೆ ಅಸಲಿ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ ಎಂದು ಹೇಳಿದ ನಟಿ ಕಂಗನಾ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ಕಿಡಿ ಕಾರಿದ್ದಾರೆ. ಇದೇನು ಹುಚ್ಚುತನವೋ? ದೇಶದ್ರೋಹವೋ? ಎಂದು ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದಾರೆ.
ಖಾಸಗಿ ವಾಹಿನಿಯ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಕಂಗನಾ, ಈ ಹೇಳಿಕೆ ನೀಡಿದ್ದಾರೆ.
ಕಂಗನಾ ಈ ಹೇಳಿಕೆಗೆ ಟ್ವಿಟ್ಟರ್ ಮೂಲಕ ತಿರುಗೇಟು ನೀಡಿರುವ ವರುಣ್ ಗಾಂಧಿ, ಒಮ್ಮೆ ಮಹಾತ್ಮ ಗಾಂಧೀಜಿಯವರ ತ್ಯಾಗ ಮತ್ತು ತಪಸ್ಸಿಗೆ ಅವಮಾನ, ಮತ್ತೆ ಗಾಂಧೀಜಿ ಹಂತಕನಿಗೆ ಗೌರವ. ಈಗ ಮಂಗಲ್ ಪಾಂಡೆ, ರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಬಗ್ಗೆಯೇ ತಿರಸ್ಕಾರ ಮನೋಭಾವ ಈ ರೀತಿಯ ಆಲೋಚನೆಯನ್ನು ಹುಚ್ಚುತನ ಎನ್ನಬೇಕೋ ಅಥವಾ ದೇಶದ್ರೋಹ ಎಂದು ಕರೆಯಬೇಕೋ ಎಂದು ಪ್ರಶ್ನಿಸಿದ್ದಾರೆ.
PublicNext
12/11/2021 08:48 am