ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಿಎಂ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ: ಅವರು ಬದಲಾವಣೆ ಆಗುವುದಿಲ್ಲ

ಧಾರವಾಡ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಅವರು ಬದಲಾವಣೆ ಆಗುವುದಿಲ್ಲ ಎಂಬ ವಿಶ್ವಾಸ ಇದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರ ಒಳ್ಳೆಯ ಕೆಲಸ ಮಾಡುತ್ತಾರೋ ಅವರು ರಾಜ್ಯದ ಆರ್ಥಿಕ ಪರಿಸ್ಥಿತಿ ಕೆಟ್ಟಾಗಲೇ ಮುಖ್ಯಮಂತ್ರಿ ಆಗಿರುತ್ತಾರೆ. ಬೊಮ್ಮಾಯಿ ಈಗ ಮುಖ್ಯಮಂತ್ರಿ ಆಗಿದ್ದಾರೆ. ಅವರು ಬದಲಾವಣೆ ಆಗುವುದಿಲ್ಲ. ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು.

ಬೆಳಗಾವಿಯಲ್ಲೇ ಚಳಿಗಾಲದ ಅಧಿವೇಶನ ನಡೆಯಲಿದೆ. ಅದರ ಬಗ್ಗೆ ಗೊಂದಲ ಬೇಡ. ನಿಗದಿಪಡಿಸಿದ ದಿನಾಂಕದಂತೆ ಅಧಿವೇಶನ ನಡೆಯಲಿದೆ ಎಂದರು.

ಶೀಮ್ಲಾದಲ್ಲಿ ಆಲ್ ಇಂಡಿಯಾ ಸ್ಪೀಕರ್ಸ್ ಸಭೆ ಇದ್ದು, ಸದನದಲ್ಲಿ ಧರಣಿ ಕುಳಿತುಕೊಳ್ಳುವುದು, ಗೊಂದಲ ಎಬ್ಬಿಸುವುದು ಈ ಎಲ್ಲ ಚಟುವಟಿಕೆಗಳಿಗೆ ಬ್ರೇಕ್ ಹಾಕುವ ಸಂಬಂಧ ಚರ್ಚೆ ನಡೆಯಲಿದೆ. ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿ ಹಾಗೂ ಜನಪರ ಕೆಲಸಗಳಿಗೆ ಅಣಿಯಾಗುವಂತೆ ಪ್ರೇರೇಪಣೆ ನೀಡುವುದೇ ನಮ್ಮ ಉದ್ದೇಶವಾಗಿದೆ ಎಂದರು.

Edited By : Manjunath H D
PublicNext

PublicNext

13/11/2021 01:43 pm

Cinque Terre

36.76 K

Cinque Terre

2

ಸಂಬಂಧಿತ ಸುದ್ದಿ