ನವದೆಹಲಿ: ಕಾಂಗ್ರೆಸ್ ಆಡಳಿತದಲ್ಲಿ 'ಷರಿಯಾ ಕಾನೂನು' ವ್ಯವಸ್ಥೆಯ ಒಂದು ಭಾಗವಾಗಿತ್ತು. ಸುಪ್ರೀಂ ಕೋರ್ಟ್ ತೀರ್ಪಿನಲ್ಲೂ ಅವುಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿತ್ತು ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ ಹೇಳಿದ್ದಾರೆ.
ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮೊದಲು ಭಾರತವು ಭಾಗಶಃ ಮುಸ್ಲಿಂ ರಾಷ್ಟ್ರವಾಗಿತ್ತು. ಕಾಂಗ್ರೆಸ್ ಆಳ್ವಿಕೆಯಲ್ಲಿ ಭಾರತವು ಭಾಗಶಃ ಮುಸ್ಲಿಂ ರಾಷ್ಟ್ರವಾಗಿತ್ತು. ಷರಿಯಾ ನಿಬಂಧನೆಗಳು ಸಾಂವಿಧಾನಿಕ ವ್ಯವಸ್ಥೆಯ ಭಾಗವಾಗಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಹಾರಾಷ್ಟ್ರದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಹಿಂದುತ್ವವನ್ನು ದೂಷಿಸಲು ತರಬೇತಿ ನೀಡುತ್ತಿದ್ದಾರೆ. ಕೋಮು ವೈಷಮ್ಯ ಮತ್ತು ಹಿಂಸಾಚಾರವನ್ನು ಪ್ರಚೋದಿಸಲು ಸಂಘಟಿತ ಪ್ರಚಾರವನ್ನು ನಡೆಸುತ್ತಿದ್ದಾರೆ ಎಂದು ಸುಧಾಂಶು ತ್ರಿವೇದಿ ಆರೋಪಿಸಿದ್ದಾರೆ. ಆರೆಸ್ಸೆಸ್-ಬಿಜೆಪಿ ಸಿದ್ಧಾಂತಕ್ಕೆ ಸಂಬಂಧಿಸಿದ ಹಿಂದುತ್ವ ಎಂಬ ಪದವನ್ನು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಭಯೋತ್ಪಾದಕ ಇಸ್ಲಾಮಿಸ್ಟ್ ಸಂಘಟನೆಗಳೊಂದಿಗೆ ಹೋಲಿಸಿದ ನಂತರ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ.
PublicNext
14/11/2021 08:23 am