ಬೆಂಗಳೂರು: HM ಅಂದರೆ ಹೋಮ್ ಮಿನಿಸ್ಟರ್ ಎನ್ನಬೇಕೋ, ಹೆಲ್ತ್ ಮಿನಿಸ್ಟರ್ ಎನ್ನಬೇಕೋ? ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ನಿನ್ನೆ ಶನಿವಾರ ಬಿಟ್ ಕಾಯಿನ್ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕಾರ್ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ್ದರು. ಇದನ್ನು ಟ್ವೀಟ್ ಮೂಲಕ ಪ್ರಶ್ನಿಸಿರುವ ಪ್ರಿಯಾಂಕ್ ಖರ್ಗೆ, ಬಿಟ್ ಕಾಯಿನ್ ಹಗರಣದ ಬಗ್ಗೆ ರಾಜ್ಯದ ಗೃಹ ಸಚಿವರು ಉತ್ತರಿಸಬೇಕು. ಕಾರಣ, ಇದು ಗೃಹ ಸಚಿವಾಲಯಕ್ಕೆ ಸಂಬಂಧಿಸಿದ ವಿಷಯ. ಅದು ಬಿಟ್ಟು ಆರೋಗ್ಯ ಸಚಿವರು ಮಾಧ್ಯಮಗೋಷ್ಠಿ ನಡೆಸಿದ್ದು ಯಾಕೆ? ಎಂದಿದ್ದಾರೆ.
ತಮ್ಮ ಇಲಾಖೆಗೆ ಸಂಬಂಧವಿಲ್ಲದ ವಿಷಯಗಳ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಸುಧಾಕರ್, ಸರ್ಕಾರದ ಪರ ಸಮರ್ಥನೆ ಮಾಡಿಕೊಂಡಿದ್ದಾರೆ. ಹಾಗಾದ್ರೆ ಗೃಹ ಸಚಿವರು ಬಂದು ಕೋವಿಡ್ ಲಸಿಕಾಕರಣದ ಬಗ್ಗೆ ಮಾಹಿತಿ ಕೊಡ್ತಾರಾ? ಎಂದು ಕೇಳುವ ಮೂಲಕ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.
PublicNext
14/11/2021 01:20 pm