ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಭಾರೀ ಚರ್ಚೆಯಾಗುತ್ತಿದ್ದು, ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೀಗಿದ್ದರೂ ಪ್ರಕರಣದಲ್ಲಿ ಮೂಲ ಬಿಜೆಪಿ ಸಚಿವರು ಹಾಗೂ ನಾಯಕರು ಮೌನ ವಹಿಸಿರುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೇಸರಕ್ಕೆ ಕಾರಣವಾಗಿ ಎನ್ನಲಾಗಿದೆ.
ಪಕ್ಷದ ಮುಖ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್, ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಅವರು ನಿತ್ಯ ಸುದ್ದಿಗೋಷ್ಠಿ ಹಾಗೂ ಹೇಳಿಕೆಗಳ ಮೂಲಕ ಕಾಂಗ್ರೆಸ್ ವಿರುದ್ಧ ಮುಗಿಬೀಳುತ್ತಿದ್ದಾರೆ. ಸಚಿವ ಡಾ. ಕೆ.ಸುಧಾಕರ್ ಸುದ್ದಿಗೋಷ್ಠಿ ನಡೆಸಿದ್ದು ಬಿಟ್ಟರೆ ಮೂಲ ಬಿಜೆಪಿ ಸಚಿವರು ಹಾಗೂ ಪಕ್ಷದ ನಾಯಕರು ಮುಖ್ಯಮಂತ್ರಿ ಪರ ಗಟ್ಟಿಯಾಗಿ ನಿಲ್ಲುತ್ತಿಲ್ಲ. ಸಂಪುಟದ ಸಚಿವರೊಬ್ಬರೇ ಬಿಟ್ ಕಾಯಿನ್ ವಿಚಾರದಲ್ಲಿ ಇಲ್ಲಸಲ್ಲದ ವದಂತಿ ಹರಿಬಿಡುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿಯವರು ಅಮಿತ್ ಶಾ ಹಾಗೂ ಜೆ.ಪಿ. ನಡ್ಡಾ ಅವರಿಗೂ ದೂರು ನೀಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.
PublicNext
14/11/2021 11:13 pm