ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಭೇಟಿಯಾಗಿ ರಹಸ್ಯ ಮಾತುಕತೆ ನಡೆಸಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ಅವರ ತೋಟದ ಮನೆಯಲ್ಲಿ ಈ ಭೇಟಿ ನೀಡಿದ್ದು, ಉಭಯ ನಾಯಕರು ಸುಮಾರು ಒಂದು ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಈ ರಹಸ್ಯ ಮಾತುಕತೆಯಲ್ಲಿ ಪ್ರಸಕ್ತ ರಾಜಕೀಯ ಬೆಳವಣಿಗೆ ಕುರಿತು ಸುದೀರ್ಘ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ನಂತರ ರಮೇಶ್ ಜಾರಕಿಹೊಳಿ ಬೆಳಗಾವಿಗೆ ತೆರಳಿದ್ದು, ಯತ್ನಾಳ್ ಸಿಂದಗಿ ಪಟ್ಟಣಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಉಭಯ ನಾಯಕರ ಈ ಭೇಟಿ ರಾಜ್ಯ ಬಿಜೆಪಿ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈಗಾಗಲೇ ರಮೇಶ್ ಜಾರಕಿಹೊಳಿ ಬೊಮ್ಮಾಯಿ ಸಂಪುಟ ಸೇರಲು ತಂತ್ರಗಾರಿಕೆ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಹಿಂದಿನ ಬಿಎಸ್ವೈ ಸರ್ಕಾರದ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದ್ದ, ಯತ್ನಾಳ್ ಸದ್ಯ ಸೈಲೆಂಟ್ ಆಗಿದ್ದಾರೆ. ಇದೀಗ ಇವರಿಬ್ಬರು ಒಟ್ಟಿಗೆ ಸೇರಿ ಮಾತುಕತೆ ನಡೆಸಿರುವುದು ಬಹಳಷ್ಟು ಕುತೂಹ ಮೂಡಿಸಿದೆ.
PublicNext
15/11/2021 08:39 am