ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೀ...ಹಂಸಲೇಖರೆ, ನಿಮ್ಮ ಮನೆಗೆ ಮುಸ್ಲಿಂ ಸ್ನೇಹಿತರನ್ನು ಕರೆದು ಹಂದಿ ಮಾಂಸದೂಟ ಹಾಕಿ ನೋಡೋಣ?

ಮೈಸೂರು: ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಹೇಳಿಕೆ ವಿರುದ್ದ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಜನಾಭಿಪ್ರಾಯದ ವಿರುದ್ಧ ಮಾತಾನಾಡಿದ ನಂತರ ಕ್ಷಮೆಯಾಚಿಸುವ ಛಾಳಿ ಈಗೀಗ ಹೆಚ್ಚಾಗುತ್ತಿದೆ.ಹಂಸಲೇಖರು ಪರಿಜ್ಞಾನದಿಂದ ಮಾತಾಡಬೇಕಿತ್ತು ಎಂದಿದ್ದಾರೆ.

ಪೇಜಾವರ ಶ್ರೀಗಳು ಬೇರೆ ರೀತಿಯ ಜಾತಿ ಸ್ವಾಮೀಜಿ ರೀತಿ ಅಲ್ಲ. ಕರ್ಮಠ ವ್ಯವಸ್ಥೆಯನ್ನು ಮೀರಿ ಸಮಾನತೆ ಸಾರಿದವರು

ಸಾಧು ಸಂತರ ಆಹಾರ ಪದ್ಧತಿ ಸಸ್ಯಹಾರ, ಮನಸ್ಸಿನ ತಾರತಮ್ಯ ತೆಗೆದು ಹಾಕಲು ಶ್ರೀಗಳು ಹೋಗಿದ್ದರೆ ಹೊರತು ಆಹಾರ ಪದ್ಧತಿಯ ಸಮಾನತೆಗೆ ಅಲ್ಲ ಎಂದರು.

ನಿಮ್ಮ ಮನೆಗೆ ಮುಸ್ಲಿಂ ಸ್ನೇಹಿತರನ್ನು ಕರೆಯಿರಿ, ಅವರಿಗೆ ಹಂದಿ ಮಾಂಸದ ಊಟ ಹಾಕಿ, ಅವರು ತಿನ್ನುತ್ತಾರಾ ನೋಡಿ, ಮುಸ್ಲಿಂ ಧರ್ಮದಲ್ಲಿ ಹಂದಿ ಮಾಂಸ ತಿನ್ನುವುದು ನಿಷೇಧ, ಅದಕ್ಕೆ ಅವರು ತಿನ್ನುವುದಿಲ್ಲ.ಆಗ ಅದನ್ನು ತಪ್ಪು ಎನ್ನುತ್ತೀರಾ?

ಪ್ರಗತಿಪರ ಅನ್ನಿಸಿ ಕೊಳ್ಳುವ ಗೀಳಿಗೆ ಬಿದ್ದು, ಪ್ರಚಾರಕ್ಕಾಗಿ ಹೀಗೆ ಮಾತಾಡುತ್ತಿದ್ದಾರೆ ಎಂದು ಗರಂ ಆದರು.

ಹಂಸಲೇಖ ಅವರು ಬಾಯಿ ತಪ್ಪಿನಿಂದ ಈ ರೀತಿ ಹೇಳಿದ್ದಾರೆ ಎಂದು ಅನ್ನಿಸುವುದಿಲ್ಲ.ಪ್ರಚಾರದ ಗೀಳಿಗೆ ಬಿದ್ದಾಗ ಅಸಂಬದ್ಧ ಮಾತು ಬರುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.

Edited By : Manjunath H D
PublicNext

PublicNext

15/11/2021 01:16 pm

Cinque Terre

72.22 K

Cinque Terre

48

ಸಂಬಂಧಿತ ಸುದ್ದಿ