ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಟ್ ಕಾಯಿನ್ ಬಡಿದಾಟ ಜೋರಾಗಿಯೇ ನಡೆದಿದೆ. ಟೀಕಾಸ್ತ್ರ ಪ್ರಹಾರಕ್ಕೆ ಇದು ವೇದಿಕೆ ಒದಗಿಸಿದಂತಾಗಿದೆ. ಟೀಕಾಸ್ತ್ರಗಳ ನಡುವೆ ಟ್ವೀಟಾಸ್ತ್ರಗಳು ಕೂಡ ಪ್ರಯೋಗವಾಗುತ್ತಿವೆ. ಈಗ ಬಿಜೆಪಿ ಮತ್ತೆ ಕಾಂಗ್ರೆಸ್ ಮೇಲೆ ಬಿಟ್ ಕಾಯಿನ್ ಕುರಿತಾಗಿ ಟ್ವೀಟಾಸ್ತ್ರ ಪ್ರಯೋಗಿಸಿದೆ.
ಮೊಹಮ್ಮದ್ ನಲಪಾಡ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಆಪ್ತ. ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ, ಪ್ರಭಾವಿ ಅಳಿಯ ರಾಬರ್ಟ್ ವಾದ್ರಾಗೆ ಆಪ್ತರಾಗಿದ್ದಾರೆ. ಹಾಗಾದರೆ ಬಿಟ್ ಕಾಯಿನ್ ಪ್ರಕರಣದ ರೂವಾರಿಗಳು ಯಾರು? ಎಂದು ಟ್ವೀಟ್ ಮೂಲಕ ಪ್ರಶ್ನೆ ಮಾಡಿದೆ.
ಬಿಟ್ ಕಾಯಿನ್ ವಿಚಾರ ಮೊದಲು ಪ್ರಸ್ತಾಪಿಸಿದ್ದು ಸಿದ್ದರಾಮಯ್ಯ. ಡಿಕೆಶಿ ಬಣದ ನಲಪಾಡ್‌ಗೆ ಅಧಿಕಾರ ತಪ್ಪಿಸುವುದು, ವಿನಾಕಾರಣ ಒಂದು ರಾಜಕೀಯದ ಹುಯಿಲೆಬ್ಬಿಸುವುದೇ ಇದರ ಉದ್ದೇಶ. ಬಿಟ್ ಕಾಯಿನ್ ವಿಚಾರ ಕಾಂಗ್ರೆಸ್ ನಾಯಕರಿಬ್ಬರ ನಡುವೆ ಇರುವ ರಾಜಕೀಯ ವೈಷಮ್ಯದ ಪ್ರತಿಫಲನವಷ್ಟೇ. ಅದರಿಂದಾಚೆಗೆ ಬೇರೇನಿಲ್ಲ ಎಂದು ಬಿಜೆಪಿ ಹೇಳಿದೆ.
PublicNext
15/11/2021 03:54 pm