ಬೆಂಗಳೂರು: ಬಿಟ್ ಕಾಯಿನ್ ಕಗ್ಗಂಟು ಮತ್ತಷ್ಟು ಬಿಗಿಯಾಗುತ್ತಿದ್ದಂತೆ ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಿ ಪಕ್ಷದ ವರಿಷ್ಟರನ್ನು ಭೇಟಿಯಾಗಿ ಬಂದಿದ್ದರು. ಸಿಎಂ ವಾಪಸ್ ಬರುತ್ತಿದ್ದಂತೆ ದೆಹಲಿಗೆ ದೌಡಾಯಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಪಸ್ ಬಂದಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಬಂದ ಶೆಟ್ಟರ್ ಸೀದಾ ಹೋಗಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಇಬ್ಬರು ಮಾಜಿ ಸಿಎಂಗಳ ಈ ಭೇಟಿ ಕುತುಹಲಕ್ಕೆ ಕಾರಣವಾಗಿದೆ.
ಶುಕ್ರವಾರ ಮಧ್ಯಾಹ್ನ ಹುಬ್ಬಳ್ಳಿಯಿಂದ ದೆಹಲಿಗೆ ತೆರಳಿದ್ದ ಶೆಟ್ಟರ್ ಯಡಿಯೂರಪ್ಪರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದರು. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ್ದರು.
ಒಂದಿಷ್ಟು ರಾಜಕೀಯ ಪಕ್ಷದ ಬಗ್ಗೆ ವಿವರಣೆ ನೀಡಿದ್ದ ಶೆಟ್ಟರ್, ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ ನಂತರ ಅಭ್ಯರ್ಥಿಗಳ ಪರ ವಕಾಲತ್ತು ವಹಿಸಿ ಸಹೋದರ ಪ್ರದೀಪ್ ಶೆಟ್ಟರ್‌ಗೆ ಟಿಕೆಟ್ ನೀಡುವಂತೆ ವರಿಷ್ಠರಲ್ಲಿ ಮನವಿ ಮಾಡಿದ್ದರು.
PublicNext
15/11/2021 04:23 pm