ವರದಿ: ಗಣೇಶ್ ಹೆಗಡೆ
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಶುರುವಾಗಿದೆ. ಚುನಾವಣೆ ಶಾಂತಿಯುತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸಲು ಚುನಾವಣಾ ಆಯೋಗ ಎಲ್ಲ ಸಿದ್ಧತೆ ಮಾಡಿಕೊಂಡಿದೆ.
ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ನವೆಂಬರ್ 23ರ ಮಧ್ಯಾಹ್ನ 3 ಗಂಟೆಯೊಳಗಾಗಿ ನಾಮಪತ್ರ ಸಲ್ಲಿಸಬಹುದಾಗಿದೆ. ಡಿಸೆಂಬರ್ 10ರ ಶುಕ್ರವಾರ ಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ಮಾಡ ಬಹುದಾಗಿದೆ. ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.
ಈ ಚುನಾವಣೆಯಲ್ಲಿ ಲೋಕಸಭಾ, ರಾಜ್ಯಸಭಾ, ವಿಧಾನಸಭಾ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಮತದಾನದ ಹಕ್ಕು ಹೊಂದಿರುತ್ತಾರೆ. ಬೆಂಗಳೂರು ನಗರ ಸಂಸ್ಥೆಗೆ ನಡೆಯಲಿರುವ ಚುನಾವಣೆಯಲ್ಲಿ ನಗರದ 2,059 ಮಂದಿ ಮತ ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.
ನಗರದಲ್ಲಿ 86 ಮತಗಟ್ಟೆಗಳಿದ್ದು, ಅಭ್ಯರ್ಥಿಗಳು ನಾಮಪತ್ರ ಪ್ರಕ್ರಿಯೆ ಅರಂಭವಾಗಿದೆ. ಎಲ್ಲ ತಾಲ್ಲೂಕು, ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಮತದಾರರ ಕರಡು ಪಟ್ಟಿ ಹಾಕಲಾಗಿದೆ.
PublicNext
16/11/2021 11:49 am