ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮರಳಿ ಕಾಂಗ್ರೆಸ್ ಸೇರಿದ ನಟಿ ಭಾವನಾ: ಸ್ವಾಗತಿಸಿದ ಸುರ್ಜೆವಾಲಾ

ಬೆಂಗಳೂರು: ಕಾಂಗ್ರೆಸ್ ವಲಯದಲ್ಲಿ ಸುಮಾರು ವರ್ಷಗಳಿಂದ ಗುರುತಿಸಿಕೊಂಡಿದ್ದ ನಟಿ ಭಾವನಾ ಕಾಂಗ್ರೆಸ್‌ಗೆ ಪುನಃ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಭೇಟಿಯಾಧ ಭಾವನಾ ಕಾಂಗ್ರೆಸ್ ಸದಸ್ಯತ್ವ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸುರ್ಜೆವಾಲ, ‘ಕಾಂಗ್ರೆಸ್‌ನ ಮಾಜಿ ಕಾರ್ಯಕರ್ತೆ, ಕನ್ನಡದ ನಟಿ ಭಾವನಾ ರಾಮಣ್ಣ ಅವರು ನನ್ನನ್ನು ಭೇಟಿಯಾದರು. ಕರ್ನಾಟಕದಲ್ಲಿ ಕಾಂಗ್ರೆಸ್‌ ಸೇರಿ, ಪಕ್ಷಕ್ಕಾಗಿ ದುಡಿಯುವ ಸಂಕಲ್ಪವನ್ನು ಅವರು ಮಾಡಿದ್ದಾರೆ. ಪ್ರತಿಯೊಬ್ಬರ ಸೇರ್ಪಡೆಯೊಂದಿಗೆ ಕಾಂಗ್ರೆಸ್‌ ಪ್ರಾಬಲ್ಯ ಪಡೆಯಲಿದೆ ಎಂದು ನಾನು ನಿಶ್ಚಿತವಾಗಿ ಭಾವಿಸಿದ್ದೇನೆ. ಅವರಿಗೆ ಶುಭಾಶಯಗಳು,‘ ಎಂದು ಟ್ವೀಟ್‌ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

16/11/2021 07:16 pm

Cinque Terre

41.44 K

Cinque Terre

4

ಸಂಬಂಧಿತ ಸುದ್ದಿ