ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರ್ಗಿ-ಬಳ್ಳಾರಿ ಮೇಯರ್ ಚುನಾವಣೆ ಮುಂದೂಡಿಕೆ

ಕಲಬುರ್ಗಿ: ರಾಜ್ಯದ ಗಮನ ಸೆಳೆದಿದ್ದ ಹಾಗೂ ತೀವ್ರ ಕುತೂಹಲ ಕೆರಳಿಸಿದ್ದ ಕಲಬುರ್ಗಿ ಮಹಾನಗರ ಪಾಲಿಕೆ ಮಹಾಪೌರ- ಉಪಮಹಾಪೌರ ಚುನಾವಣೆ ಇದೇ ನ. 20ರಂದು ನಿಗದಿಯಾಗಿತ್ತು ಆದರೆ ನಿಗದಿಯ ಚುನಾವಣೆ ನಡೆಯುತ್ತಿಲ್ಲ.

ಸದ್ಯ ಚುನಾವಣೆ ಮುಂದೂಡಿ ಪ್ರಾದೇಶಿಕ ಆಯುಕ್ತರು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಹೌದು ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಲಬುರ್ಗಿ ಮತ್ತು ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಸ್ಥಾನದ ಚುನಾವಣೆಗಳನ್ನು ಮುಂದೂಡಲಾಗಿದೆ ಎಂದು ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ್ ಆದೇಶ ಹೊರಡಿಸಿದ್ದಾರೆ.

ಕಲಬುರ್ಗಿ ಪಾಲಿಕೆಯ ಮೇಯರ್ ಸ್ಥಾನದ ಚುನಾವಣೆ ನ.20ಕ್ಕೆ ಹಾಗೂ ಬಳ್ಳಾರಿ ಪಾಲಿಕೆ ಮೇಯರ್ ಚುನಾವಣೆ ನ.18ಕ್ಕೆ ನಿಗದಿಯಾಗಿತ್ತು. ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಮೇಯರ್ ಸ್ಥಾನದ ಚುನಾವಣೆ ಮುಂದೂಡಲಾಗಿದೆ.

Edited By : Nirmala Aralikatti
PublicNext

PublicNext

16/11/2021 07:44 pm

Cinque Terre

25.73 K

Cinque Terre

0

ಸಂಬಂಧಿತ ಸುದ್ದಿ