ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಧಾನಿ ನರೇಂದ್ರ ಮೋದಿ ಬೆಂಗಾವಲು ಪಡೆ ಮತ್ತು ಕಾರಿನ ಹಿಂದೆ ವೇಗವಾಗಿ ನಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪ್ರಧಾನಿ ಮೋದಿ 341 ಕಿ.ಮೀ ಉದ್ದದ ಪೂರ್ವಾಂಚಲ್ ಹೆದ್ದಾರಿಯನ್ನು ಉದ್ಘಾಟಿಸಲು ಸುಲ್ತಾನ್‌ಪುರಕ್ಕೆ ಆಗಮಿಸಿದ್ದರು. ಈ ವೇಳೆ ಅವರನ್ನು ಸ್ವಾಗತಿಸಲು ಸಿಎಂ ಯೋಗಿ ಆದಿತ್ಯನಾಥ್ ಬಂದಿದ್ದಾಗ ಈ ಘಟನೆ ನಡೆದಿದೆ. ಕೆಲ ನೆಟ್ಟಿಗರು ಸಿಎಂ ಆದಿತ್ಯನಾಥ್ ಅವರನ್ನು ಅಪಹಾಸ್ಯ ಮಾಡಿದ್ದಾರೆ. ಇನ್ನು ಕೆಲವರು ಪ್ರಧಾನಿ ನರೇಂದ್ರ ಮೋದಿ ಆದಿತ್ಯನಾಥ್ ಅವರನ್ನು ಉದ್ದೇಶಪೂರ್ವಕವಾಗಿಯೇ ಹಿಂದೆ ಬಿಟ್ಟಿದ್ದಾರೆ ಎಂದು ಹೇಳಿದ್ದಾರೆ.
PublicNext
17/11/2021 09:13 am