ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ವರ್ಗಾವಣೆಗೆ ಲಂಚ ಕೊಡ್ತೀರಾ': ಪ್ರಶ್ನೆ ಕೇಳಿ ಮುಜುಗರಕ್ಕೀಡಾದ ರಾಜಸ್ಥಾನ ಸಿಎಂ ಗೆಹ್ಲೊಟ್

ಜೈಪುರ: ವರ್ಗಾವಣೆಗೆ ಲಂಚ ಕೊಡ್ತೀರಾ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಶಿಕ್ಷಕರಿಗೆ ಪ್ರಶ್ನಿಸಿ ಮುಜುಗರಕ್ಕೆ ಒಳಗಾದ ಪ್ರಸಂಗವೊಂದು ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮುಖ್ಯಮಂತ್ರಿ ಕೇಳಿದ ಪ್ರಶ್ನೆ ಮತ್ತು ಶಿಕ್ಷಕರು ಅದಕ್ಕೆ ನೀಡಿದ ಉತ್ತರದ ವಿಡಿಯೊ ತುಣುಕು ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ‘ವರ್ಗಾವಣೆಗಾಗಿ ನೀವು ಲಂಚ ಕೊಡಬೇಕೆ’ ಎಂದು ಮುಖ್ಯಮಂತ್ರಿ ಕೇಳಿದಾಗ, ಅಲ್ಲಿದ್ದ ಶಿಕ್ಷಕರು ಒಕ್ಕೊರಲಿನಿಂದ ಹೌದು, ಲಂಚ ಕೊಡಬೇಕಿದೆ. ಶಾಸಕರಿಂದ ಶಿಫಾರಸನ್ನೂ ಮಾಡಿಸಬೇಕಿದೆ ಎಂದು ಉತ್ತರಿಸಿದ್ದಾರೆ.

ಶಿಕ್ಷಕರ ಉತ್ತರ ಕೇಳಿಸಿಕೊಂಡ ಗೆಹ್ಲೋಟ್​ ತಕ್ಷಣಕ್ಕೆ ಹೇಗೆ ಪ್ರತಿಕ್ರಿಯಿಸಬೇಕು ಎಂದು ತಿಳಿಯದೇ ಕಂಗಾಲಾದಂತೆ ಕಂಡುಬಂದರು. ವರ್ಗಾವಣೆಗೆ ಹಣ ನೀಡಬೇಕಾಗಿರುವುದು ದುರಾದೃಷ್ಟಕರ. ಈ ಕುರಿತು ಸಮರ್ಪಕ ನೀತಿ ರೂಪಿಸಬೇಕಿದೆ ಎಂದು ಸಿಎಂ ಗೆಹ್ಲೋಟ್ ಹೇಳಿದರು.

Edited By : Vijay Kumar
PublicNext

PublicNext

17/11/2021 01:05 pm

Cinque Terre

47.45 K

Cinque Terre

3

ಸಂಬಂಧಿತ ಸುದ್ದಿ