ಬೆಂಗಳೂರು: ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮತ್ತೆ ರಾಜಕೀಯ ಬಣ ಭುಗಿಲೆದ್ದಿದ್ದು, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮುಜುಗರ ಉಂಟುಮಾಡಿದ ಪ್ರಸಂಗ ನಡೆದಿದೆ.
ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಬೆಂಬಲಿಗರು, ಶಾಂತಿನಗರ ಶಾಸಕ ಎನ್‌ಎ ಹ್ಯಾರೀಸ್ ಅವರನ್ನು ಕಡೆಗಣಿಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಷಣಕ್ಕೆ ಅಡ್ಡಿಯಾಗಿದೆ. ಪದೇ ಪದೇ ಡಿಕೆ ಡಿಕೆ ಎಂದು ಕೆಲವರು ಘೋಷಣೆ ಕೂಗುತ್ತಿದ್ದರು. ಇನ್ನು ಕೆಲವರು ಜಮೀರ್ ಫೋಟೋ ಹಿಡಿದು ಘೋಷಣೆ ಹಾಕುತ್ತಿದ್ದರು. ಹೀಗಾಗಿ ಸಿಟ್ಟಾದ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದಿದ್ದಾರೆ.
ಬಳಿಕ ವೇದಿಕೆಗೆ ಬಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರು ಮಾತನಾಡಬೇಕಾದರೆ ನೀವು ಕೂಗುತ್ತೀರಿ. ನೀವು ಕಾಂಗ್ರೆಸ್ ದ್ರೋಹಿಗಳೆಂದು ಡಿಕೆ ಶಿವಕುಮಾರ್ ಗರಂ ಆದರು.
PublicNext
17/11/2021 03:39 pm