ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಒಬ್ಬ ಹುಚ್ಚ. ಅವರನ್ನು ಕೂಡಲೇ ನಿಮ್ಹಾನ್ಸ್‌ಗೆ ಸೇರಿಸಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆರಗ ಜ್ಞಾನೇಂದ್ರ ಏನೇನೋ ಮಾತಾಡ್ತಿದ್ದಾರೆ. ಬಿಟ್ ಕಾಯಿನ್ ಹ್ಯಾಕಿಂಗ್ ಆರೋಪಿ ಶ್ರೀಕಿಯನ್ನು ಬಳಸಿಕೊಂಡು ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ದೂರು ಬಂದರೆ ತನಿಖೆ ನಡೆಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿರುವ ಬಗ್ಗೆ ಮಾಧ್ಯಮದವರ ಪ್ರಸ್ತಾಪಕ್ಕೆ ಶಿವಕುಮಾರ್ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ಅವರಿಗೆ ಲಿಖಿತ ದೂರು ಹೋಗಿದೆ. ಇದು ಅಧಿಕೃತ ಪತ್ರ. ಅದರಲ್ಲಿ ಸಿಎಂ ಕುಟುಂಬದ ಸದಸ್ಯರು, ಹಲವು ಮಂತ್ರಿಗಳು, ಬಿಜೆಪಿ ರಾಜ್ಯಾಧ್ಯಕ್ಷರು, ಸಂಸತ್ ಸದಸ್ಯರು ಸೇರಿದಂತೆ ಹಲವರ ಹೆಸರುಗಳು ಇವೆ. ಅವರು ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ. ಗೃಹ ಸಚಿವರು ಮೊದಲು ಈ ದೂರಿನ ಬಗ್ಗೆ ಸುಮೊಟೋ ಕೇಸು ದಾಖಲಿಸಿ, ತನಿಖೆ ಮಾಡಿಸಲಿ. ಆಮೇಲೆ ಯೂತ್ ಕಾಂಗ್ರೆಸ್ ಬಗ್ಗೆ ಮಾತಾಡಲಿ ಎಂದು ಖಾರವಾಗಿ ಹೇಳಿದರು.
PublicNext
18/11/2021 03:29 pm