ದಾವಣಗೆರೆ: ಮುಂದೊಂದು ದಿನ ದೇಶದಲ್ಲಿ ದುರ್ಬೀನ್ ಹಾಕಿ ಹುಡುಕಿದರೂ ಕಾಂಗ್ರೆಸ್ ಸಿಗೋದಿಲ್ಲ.
ಪಂಜಾಬ್ನಲ್ಲಿ ಸಿಧು ಹಾಗೂ ಕರ್ನಾಟಕದಲ್ಲಿ ಸಿದ್ದರಾಮಯ್ಯರಿಂದ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ.
ದಾವಣಗೆರೆಯಲ್ಲಿ ನಡೆದ ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಐಸಿಯೂನಲ್ಲಿದೆ ಎಂದು ವ್ಯಂಗ್ಯವಾಡಿದ್ದಾರೆ. 2023ರಲ್ಲಿ ಕಾಂಗ್ರೆಸ್ನವರು ಅಧಿಕಾರಕ್ಕೆ ಬರ್ತೀವಿ ಎಂದು ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ವರ್ಸಸ್ ಡಿಕೆ ನಡೆಯುತ್ತಿದೆ. ನಿನ್ನೆ ನಡೆದ ಸಮಾವೇಶದಲ್ಲಿ ಎಲ್ಲವೂ ಗೊತ್ತಾಗುತ್ತದೆ. ಸಿದ್ದರಾಮಯ್ಯ ಈಗ ಅದಕ್ಕೆ ಸಬೂಬು ಹೇಳ್ತಿದ್ದಾರೆ. ಪಂಜಾಬ್ನಲ್ಲಿ ಸಿಧುಯಿಂದ ಕರ್ನಾಟಕದಲ್ಲಿ ಈ ಸಿದ್ದುಯಿಂದ ಕಾಂಗ್ರೆಸ್ ಸರ್ವನಾಶ ಆಗುತ್ತದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿ ಬಿಜೆಪಿ ಎಲ್ಲ ಕಡೆ ಮುಂದೆ ಕೂಡ ಅಧಿಕಾರಕ್ಕೆ ಬರುತ್ತದೆ ಎಂದು ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
PublicNext
18/11/2021 07:39 pm