ಹುಬ್ಬಳ್ಳಿ: ಕಾಂಗ್ರೆಸ್‌ನ ನಾಯಕರು ಪಾರ್ಟ್ ಟೈಮ್ ಲೀಡರ್ಸ್ ಇದ್ದಂತೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಪಾರ್ಟ್ ಟೈಮ್ ಅಲ್ಲ ಫುಲ್ ಟೈಮ್ ಲೀಡರ್ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ 25 ಸ್ಥಾನಗಳಲ್ಲಿ 15ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಆ ಮೂಲಕ ಹೊಸ ಇತಿಹಾಸವನ್ನು ಬರೆಯುತ್ತೇವೆ. ಹಿಂದುಳಿದವರನ್ನು ಕಾಂಗ್ರೆಸ್ ಕಡೆಗಣಿಸಿದ ಹಾಗೆ ಬಿಜೆಪಿ ಮಾಡಿಲ್ಲ. ಕಾಂಗ್ರೆಸ್ ಹಗರಣದ ರಾಜಕಾರಣ ಮಾಡುತ್ತಾ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ನಾಯಕರು ಚುನಾವಣೆ ಇದ್ದಾಗ ಮಾತ್ರ ಕಾಣುತ್ತಾರೆ. ಆಮೇಲೆ ಎಲ್ಲಿಯೂ ಕಾಣುವುದಿಲ್ಲ. ಇಡೀ ದೇಶ ಕಲ್ಲಿದ್ದಲು ಸಮಸ್ಯೆಯಿಂದ ಕತ್ತಲಲ್ಲಿ ಮುಳುಗುತ್ತದೆ ಅಂತ ಕಾಂಗ್ರೆಸ್‌ನವರು ಹೇಳುತ್ತಿದ್ದರು. ಕಲ್ಲಿದ್ದಲು ಸಮಸ್ಯೆಯನ್ನು ಒಂದೇ ದಿನದಲ್ಲಿ ಪ್ರಧಾನಿ ಮೋದಿ ಬಗೆಹರಿಸಿದ್ದಾರೆ. ಕಾಂಗ್ರೆಸ್ ಯಾವಾಗ ಅಧಿಕಾರಕ್ಕೆ ಬರುತ್ತದೆ ಆಗೆಲ್ಲ ಹಗರಣ ಮಾಡುತ್ತಾ ಬಂದಿದೆ ಎಂದು ಕಿಡಿಕಾರಿದರು.
PublicNext
19/11/2021 03:21 pm