ಕೋಲ್ಕತ್ತಾ: ರೈತರ ಛಲ ಬಿಡದ ಹೋರಾಟದ ಫಲವಾಗಿ ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಇದು ದೇಶದ ಕೋಟ್ಯಾಂತರ ಅನ್ನದಾತರ ಹೋರಾಟಕ್ಕೆ ದೊರೆತ ಜನ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿ ರೈತರೊಂದಿಗೆ ಕೆಟ್ಟದಾಗಿ ನಡೆದುಕೊಂಡಿದೆ. ಕಳೆದ ವರ್ಷ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ನಂತರ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಅಭಿನಂದನೆ ಸಲ್ಲಿಸಿದ್ದಾರೆ.
PublicNext
19/11/2021 03:46 pm