ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ಅತಿ ಹೆಚ್ಚು ಸ್ಥಾನ ಪಡೆಯಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿಂದು ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, ಇಂದು ಎರಡನೇ ದಿನದ ಜನಸ್ವರಾಜ್ ಸಮಾವೇಶ. ನಾಳೆ ಬಾಗಲಕೋಟೆ, ವಿಜಯಪುರ ಹಾಗೂ ಬೆಳಗಾವಿಯಲ್ಲಿ ಸಮಾವೇಶ ನಡೆಯಲಿದೆ. ಪರಿಷತ್ ಚುನಾವಣೆಯಲ್ಲಿ ನಾವು 20 ಸೀಟುಗಳನ್ನು ಹಾಕಲಿದ್ದೇವೆ. ಅದರಲ್ಲಿ ಅತೀ ಹೆಚ್ಚು ಸ್ಥಾನ ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇವತ್ತು ಬಹಳ ಐತಿಹಾಸಿಕ ದಿನ. ರೈತ ಸಮೂಹಕ್ಕೆ ನೆರವು ನೀಡುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. 7502 ಚುನಾಯಿತರು ಇಲ್ಲಿ ಇದ್ದೀರಿ. ಕನಿಷ್ಟ 5000 ಸಾವಿರ ಜನ ನಮ್ಮ ಅಭ್ಯರ್ಥಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು ಎಂದರು.
PublicNext
19/11/2021 03:51 pm