ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೋರಾಟದಲ್ಲಿ ಮಡಿದ ರೈತರ ಕುಟುಂಬಗಳಿಗೆ ₹10 ಲಕ್ಷ ಪರಿಹಾರ ನೀಡಿ: ಯು.ಟಿ.ಖಾದರ್

ಮಂಗಳೂರು: ಸತತ ಒಂದು ವರ್ಷದ ಹೋರಾಟದ ಪ್ರತಿಫಲವಾಗಿ ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಇದು ಅತ್ಯಂತ ಸ್ವಾಗತಾರ್ಹ. ಆದರೆ ದೆಹಲಿಯಲ್ಲಿನ ರೈತರ ಪ್ರತಿಭಟನೆ ವೇಳೆ ಮಡಿದ ರೈತರ ಕುಟುಂಬಗಳಿಗೆ ಕೇಂದ್ರ ಸರ್ಕಾರದಿಂದ ತಲಾ ₹10 ಲಕ್ಷ ಪರಿಹಾರ ನೀಡಬೇಕು ಎಂದು ಶಾಸಕ ಯು.ಟಿ ಖಾದರ್ ಆಗ್ರಹಿಸಿದ್ದಾರೆ.

ಶುಕ್ರವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ರೈತರ ಹೋರಾಟ ಪ್ರಜಾಪ್ರಭುತ್ವಕ್ಕೆ ದೊರೆತ ಯಶಸ್ಸು. ಮುಂಬರುವ ಪಂಚ ರಾಜ್ಯಗಳ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಸರ್ಕಾರ ಮಸೂದೆಗಳನ್ನು ವಾಪಸ್ ಪಡೆಯಲು ನಿರ್ಧರಿಸಿದೆ. ರೈತರ ಹೋರಾಟ ಟೀಕಿಸಿ ಅವಮಾನಿಸಿದ ಬಿಜೆಪಿ ಪ್ರಮುಖರು ದೇಶದ ಜನರಲ್ಲಿ ಕ್ಷಮೆ ಕೇಳಬೇಕು. ಸರ್ವಾಧಿಕಾರಿಯಂತೆ ವರ್ತಿಸಿದ ಕೇಂದ್ರ ಸರ್ಕಾರ ಕೊನೆಗೂ ಜನಾಂದೋಲನಕ್ಕೆ ಮಣಿದಿದೆ. ಎಂದಿದ್ದಾರೆ.

Edited By : Nagaraj Tulugeri
PublicNext

PublicNext

19/11/2021 09:53 pm

Cinque Terre

32.91 K

Cinque Terre

5

ಸಂಬಂಧಿತ ಸುದ್ದಿ