ಹೈದರಾಬಾದ್: ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ವಿವಾದಿತ ಮೂರು ಕೃಷಿ ಕಾಯ್ದೆ ವಿರುದ್ಧದ ಹೋರಾಟದಲ್ಲಿ ಸಾವನ್ನಪ್ಪಿರುವ 750 ರೈತ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ ನೀಡುವುದಾಗಿ ತೆಲಂಗಾಣ ಸರ್ಕಾರವು ಘೋಷಣೆ ಮಾಡಿದೆ.
ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಕೆಟಿಆರ್ ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ದೆಹಲಿಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಈ ಕುರಿತು ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ಸಂತ್ರಸ್ತ ಕುಟುಂಬಗಳಿಗೆ ಕೇಂದ್ರ ಸರ್ಕಾರವು ತಲಾ ₹ 25 ಲಕ್ಷ ಪರಿಹಾರ ನೀಡಬೇಕು. ಅವರ ವಿರುದ್ಧ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
PublicNext
21/11/2021 07:54 am