ಜೈಪುರ: ರಾಜಸ್ಥಾನದ ಹೊಸ ಸಚಿವ ಸಂಪುಟ ಇಂದು ನಿರ್ಮಾಣವಾಯ್ತು. ಜೈಪುರದ ರಾಜಭವನದಲ್ಲಿ ಒಟ್ಟು 15 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಈ ಪೈಕಿ 12 ಹೊಸ ಮತ್ತು ಮೂವರು ರಾಜ್ಯ ಸಚಿವರು ಕ್ಯಾಬಿನೆಟ್ ದರ್ಜೆಗೆ ಬಡ್ತಿ ಪಡೆದಿದ್ದಾರೆ.
ಸಮಾರಂಭದ ಮೊದಲು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಅಜಯ್ ಮಾಕೆನ್ ಅವರು ಜೈಪುರದ ಪಕ್ಷದ ಕಚೇರಿಯಲ್ಲಿ ಶಾಸಕರು ಮತ್ತು ಇತರ ಪಕ್ಷದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದರು. 2023 ರಲ್ಲಿ ಕಾಂಗ್ರೆಸ್ ಮತ್ತೆ ಸರ್ಕಾರವನ್ನು ರಚಿಸಲಿದೆ ಎಂದು ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ. ಸುಮಾರು 16 ತಿಂಗಳ ನಂತರ ಸಚಿವ ಸಂಪುಟ ಪುನಾರಚನೆ ನಡೆದಿದೆ.
PublicNext
21/11/2021 06:15 pm