ದೆಹಲಿ: ಆಮ್ ಆದ್ಮಿ ಪಾರ್ಟಿಯ ಸಿಎಂ ಅರವಿಂದ್ ಕೇಜ್ರಿವಾಲ್ ಈಗೊಂದು ಅನೌನ್ಸ್‌ಮೆಂಟ್ ಮಾಡಿದ್ದಾರೆ. ಒಂದು ವೇಳೆ ಪಂಜಾಬ್ ನಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೇ, 18 ವರ್ಷದ ಮೇಲ್ಪಟ್ಟ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳ 1000 ರೂಪಾಯಿ ಕೊಡೋದಾಗಿ ಈಗಲೇ ಹೇಳಿಕೊಂಡಿದ್ದಾರೆ.
ಪಂಜಾಬ್ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿಯೇ ಅರವಿಂದ್ ಕೇಜ್ರಿವಾಲ್ ಈ ವಿಷಯ ಹೇಳಿದ್ದಾರೆ. ಪಂಜಾಬ್ ನಲ್ಲಿ ಆಮ್ ಆದ್ಮಿ ಪಾರ್ಟಿ ಅಧಿಕಾರಕ್ಕೆ ಬಂದ್ರೆ, ಕಂಡಿತವಾಗಿಯೂ ಪ್ರತಿ ತಿಂಗಳು 1000 ರೂಪಾಯಿಯನ್ನ 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಕೊಡಲಾಗುವುದು ಎಂದು ತಿಳಿಸಿದ್ದಾರೆ.
ಒಂದೇ ಮನೆಯಲ್ಲಿ ಮೂವರು ಹೆಣ್ಣುಮಕ್ಕಳಿದ್ದರೆ, ಅವರ ಖಾತೆಗೂ ಪ್ರತೇಕ 1000 ರೂಪಾಯಿ ಹಾಕಲಾಗುವುದು ಎಂದೇ ಹೇಳಿದ್ದಾರೆ. ಆಮ್ ಆದ್ಮಿ ಪಕ್ಷದ ಈ ಪ್ರೋಗ್ರಾಂ ದೇಶದ ಅತಿ ದೊಡ್ಡ ಮಹಿಳಾ ಸಬಲೀಕರಣವೇ ಆಗಲಿದೆ ಎಂದು ಗುಣಗಾನ ಮಾಡಿಕೊಂಡಿದ್ದಾರೆ.
PublicNext
22/11/2021 06:05 pm