ಬೆಂಗಳೂರು: ಸಕ್ರಿಯ ಕಾರ್ಯಕರ್ತರಿಗೆ ಅವಕಾಶ ಕೊಟ್ಟಿದ್ದೇವೆ.ಈ ಭಾರಿ ನಮ್ಮ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಹೀಗೆ ಹೇಳಿಕೆ ಕೊಟ್ಟಿದ್ದಾರೆ.
ಪಕ್ಷದ ಹೊರಗಿನವರಿಗೆ ಟಿಕೆಟ್ ನೀಡಿರೋ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರೋ ಡಿಕೆ ಶಿವಕುಮಾರ್, ಸ್ಥಳೀಯ ನಾಯಕರು ಹೇಳಿದಂತೆ ಕೇಳಬೇಕಾಗುತ್ತದೆ.ರಾಜ್ಯಸಭಾ ಚುನಾವಣೆಯಲ್ಲಿ ನಾವು ನೋಡಿದ್ದೇವೆ. ಹೀಗಾಗಿ ಇದು ಅನಿವಾರ್ಯವಾಗಿದೆ ಅಂತಲೇ ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನು ಎಸ್.ಆರ್.ಪಾಟೀಲರ ವಿಚಾರಕ್ಕೆ ಬಂದ್ರೆ, ಅವರನ್ನ ನಾವು ಕೈ ಬಿಡೋದಿಲ್ಲ. ಅವರಿಗೆ ಸೂಕ್ತ ಸ್ಥಾನಮಾನ ನೀಡುತ್ತೇವೆ. ಕೊಂಡಯ್ಯ ವಿಚಾರದಲ್ಲಿ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಹೈಕಮಾಂಡ್ ಹೇಳಿದ್ದನ್ನ ಕೇಳಬೇಕಲ್ವೆ ಎಂದು ಹೇಳಿದ್ದಾರೆ ಡಿಕೆ ಶಿವಕುಮಾರ್.
PublicNext
22/11/2021 09:01 pm