ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇವಲ 6 ಕ್ಷೇತ್ರದಲ್ಲಿ ಮಾತ್ರ ಜೆಡಿಎಸ್ ಸ್ಪರ್ಧೆ

ಮೈಸೂರು:ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಕೇವಲ 6 ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸುತ್ತದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರ್ ಸ್ವಾಮಿ ಮೈಸೂರಿನಲ್ಲಿಂದು ನಡೆದ ಕಾರ್ಯಕರ್ತರ ಸಭೆ ಬಳಿಕ ಮಾಧ್ಯಮಕ್ಕೆ ಹೇಳಿದ್ದಾರೆ.

ಜೆಡಿಸ್ ಪಕ್ಷ ಕೇವಲ 6 ಕ್ಷೇತ್ರದ ಮಾತ್ರ ಸ್ಪರ್ಧಿಸಲಿದೆ. ಅವುಗಳಲ್ಲಿ ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಸನ, ಕೋಲಾರ, ಮೈಸೂರು, ತುಮಕೂರು, ಹಾಸನ ಕ್ಷೇತ್ರಗಳಲ್ಲಿ ಮಾತ್ರ ಇದೆ ಎಂದು ಹೆಚ್ಡಿಕೆ ತಿಳಿಸಿದ್ದಾರೆ.

ಈ ಚುನಾವಣೆಯಲ್ಲಿ ಮೈಸೂರು- ಚಾಮರಾಜನಗರ ಕ್ಷೇತ್ರ ಗೆಲ್ಲಲೇಬೇಕು ಅಂತ ತೀರ್ಮಾನಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಕಾರ್ಯಕರ್ತರ ಅಭಿಪ್ರಾಯವನ್ನೂ ಸಂಗ್ರಹಿಸಿದ್ದೇವೆ. ಆದರೆ ಅಭ್ಯರ್ಥಿಗಳ ಪಟ್ಟಿ ಇನ್ನೂ ಫೈನಲ್ ಮಾಡಿಲ್ಲ. ಶಾಸಕರಾದ ಸಾ.ರಾ.ಮಹೇಶ್, ಮಹದೇವು, ಅಶ್ವಿನ್ ಕುಮಾರ್ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ.

ಇನ್ನು ಸಂದೇಶ್ ನಾಗರಾಜ್ ಕೊನೆ ಕ್ಷಣದಲ್ಲಿ ಪ್ರಯತ್ನ ಮಾಡಿದ್ದಾರೆ‌. ಸಂದೇಶ್ ನಾಗರಾಜ್ ಅವರಿಗೆ ಟಿಕೆಟ್ ನೀಡೋ ವಿಚಾರದಲ್ಲಿ ಕಾರ್ಯಕರ್ತರ ವಿರೋಧ ಇದೆ ಅಂತಲೇ ಹೇಳಿದ್ದಾರೆ ಎಚ್.ಡಿ.ಕುಮಾರ್ ಸ್ವಾಮಿ.

Edited By : Nagesh Gaonkar
PublicNext

PublicNext

22/11/2021 10:57 pm

Cinque Terre

89.48 K

Cinque Terre

0

ಸಂಬಂಧಿತ ಸುದ್ದಿ