ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿ.ಪ ವಿಪಕ್ಷ ನಾಯಕ ಎಸ್‌.ಆರ್. ಪಾಟೀಲ್‌ಗೆ 'ಕೈ'ತಪ್ಪಿದ ಟಿಕೆಟ್: ಅಭಿಮಾನಿಗಳ ಆಕ್ರೋಶ

ಬಾಗಲಕೋಟೆ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ಸಂಬಂಧ ಕಾಂಗ್ರೆಸ್‌ ಸೋಮವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಅಚ್ಚರಿಯ ರೀತಿಯಲ್ಲಿ ವಿಧಾನ ಪರಿಷತ್‌ ವಿಪಕ್ಷ ನಾಯಕ ಎಸ್‌.ಆರ್. ಪಾಟೀಲ್ ಅವರಿಗೆ ಕಾಂಗ್ರೆಸ್‌ ಟಿಕೆಟ್ ಘೋಷಿಸಿಲ್ಲ.

ಕಾಂಗ್ರೆಸ್‌ ಘೋಷಿಸಿದ 17 ಅಭ್ಯರ್ಥಿಗಳಲ್ಲಿ ಎಸ್‌.ಆರ್‌. ಪಾಟೀಲ್ ಅವರ ಹೆಸರು ಇರದೇ ಇರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಬೀಳಗಿ ಕಾಂಗ್ರೆಸ್ ಘಟಕದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಬೀಳಗಿ ತಾಲೂಕಿನ ಬಾಡಗಂಡಿಯಲ್ಲಿ ಎಸ್.ಆರ್. ಪಾಟೀಲ್ ಅಭಿಮಾನಿಗಳು ಪ್ರತಿಭಟನೆಗೆ ಇಳಿದಿದ್ದಾರೆ. ಅಷ್ಟೇ ಅಲ್ಲದೆ ಬೀಳಗಿ ತಾಲೂಕು ಘಟಕ ಹಾಗೂ ಬ್ಲಾಕ್ ಕಾಂಗ್ರೆಸ್ ಘಟಕ, ಪಟ್ಟಣ ಪಂಚಾಯಿತಿ ಸದಸ್ಯರ ಸಾಮೂಹಿಕ ರಾಜೀನಾಮೆ ಬೆದರಿಕೆಯನ್ನೂ ಹಾಕಿದ್ದಾರೆ.

Edited By : Shivu K
PublicNext

PublicNext

23/11/2021 09:47 am

Cinque Terre

34.37 K

Cinque Terre

2

ಸಂಬಂಧಿತ ಸುದ್ದಿ