ಮೈಸೂರು: ಮುಂಬರುವ ವಿಧಾನ ಪರಿಷತ್ ಚುನಾವಣಾ ಸಮರದಲ್ಲಿ ನಮ್ಮ ಸಾಮರ್ಥ್ಯಕ್ಕನುಸಾರವಾಗಿ ಏಳು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ.
ಎಲ್ಲೆಲ್ಲಿ ಗೆಲುವಿಗೆ ಅವಕಾಶ ಇದೆಯೋ ಅಲ್ಲಿ ಪಕ್ಷದಿಂದ ಸ್ಪರ್ಧೆ ಮಾಡುತ್ತೇವೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ ಸ್ಥಳೀಯ ನಾಯಕರು ಪರಿಸ್ಥಿತಿಗೆ ಅನುಗುಣವಾಗಿ ತೀರ್ಮಾನ ಮಾಡ್ತಾರೆ. ನನ್ನ ಗುರಿ ಇರೋದು ಮುಂದಿನ ವಿಧಾನಸಭಾ ಚುನಾವಣೆ ಮೇಲೆ. 123 ಕ್ಷೇತ್ರಗಳನ್ನ ಗೆದ್ದು ಅಧಿಕಾರ ಹಿಡಿಯಬೇಕಿದೆ ಕಳೆದ ಬಾರಿಗಿಂತ ಈಬಾರಿ ಹೆಚ್ಚು ವಿಧಾನ ಪರಿಷತ್ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ ಎಂದರು.
ನಮ್ಮ ಶಂಖವನ್ನ ನಾನೇ ಊದಬೇಕು,ಎಲ್ಲಾ ಕ್ಷೇತ್ರಗಳಲ್ಲಿಯೂ ನಾನೇ ಪ್ರಚಾರ ಮಾಡಬೇಕಿದೆ. ನಮಗೆ ಶಂಖ ಊದಲು ಅವಕಾಶ ಸಿಗುವವರೆಗೆ ಶಂಖ ಊದುವೆ ಎಂದು ಸಚಿವ ಈಶ್ವರಪ್ಪ ಹೇಳಿಕೆಗೆ ಹೆಚ್ಡಿಕೆ ಟಾಂಗ್ ಕೊಟ್ಟಿದ್ದಾರೆ.
ನಮಗೆ ಕಾರ್ಯಕರ್ತರೇ ಶಕ್ತಿ, ಕಾರ್ಯಕರ್ತರಿಗೆ ನಾಯಕನನ್ನ ಹುಟ್ಟುಹಾಕುವ ಸಾಮರ್ಥ್ಯ ಇರೋದು. ಹೀಗಾಗಿ ಬಂಡೇಳುವ ಶಾಸಕರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಪರ್ಯಾಯ ನಾಯಕರನ್ನ ಕಾರ್ಯಕರ್ತರೇ ಹುಡುಕಿಕೊಂಡಿದ್ದಾರೆ.
ಚುನಾವಣೆ ಎದುರಿಸಲು ಮಾನಸಿಕವಾಗಿ ಸಿದ್ಧರಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದರು.
PublicNext
23/11/2021 10:51 am