ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆಂಬ ಕಾರಣಕ್ಕಾಗಿ ಮಾಜಿ ಸಚಿವ ಹಾಗೂ ಅರಕಲಗೂಡು ಮಾಜಿ ಶಾಸಕ ಎ. ಮಂಜು ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಜತೆಗೆ ಪಕ್ಷದಲ್ಲಿ ಅವರಿಗಿದ್ದ ಮಂಡ್ಯ ಜಿಲ್ಲೆಯ ಪ್ರಭಾರಿ ಸೇರಿದಂತೆ ಎಲ್ಲ ಜವಾಬ್ದಾರಿಗಳನ್ನು ಹಿಂಪಡೆಯಲಾಗಿದೆ.
ಇತ್ತೀಚೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದ ಮಂಜು ಕಾಂಗ್ರೆಸ್ ಪಕ್ಷ ಸೇರುವ ಒಲವು ತೋರಿದ್ದರು. ಹೀಗಾಗಿ ಎ. ಮಂಜು ಅವರ ನಡೆ ಸಂಶಯಾಸ್ಪದ ಎಂದು ಪರಿಗಣಿಸಿ ಬಿಜೆಪಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ಈ ಆದೇಶ ನೀಡಿದ್ದಾರೆ.
PublicNext
23/11/2021 08:50 pm