ದಾವಣಗೆರೆ : ಆಡಳಿತರೂಢ ಬಿಜೆಪಿ ಪಕ್ಷದ ಮಾಜಿ ಮುಖ್ಯಮಂತ್ರಿ ಬಿಎಸ್ ವೈ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಹೋಗುವುದಾಗಿ ಹೇಳಿದ್ದಾರೆ.
ಈ ಕುರಿತು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ ಬಿಎಸ್ ಯಡಿಯೂರಪ್ಪ ಸ್ಟೋಟಕ ಹೇಳಿಕೆ ನೀಡಿದ್ದಾರೆ.
ಜೆಡಿಎಸ್ ನವರು ಎಲ್ಲೆಲ್ಲಿ ಅರ್ಭರ್ಥಿಗಳನ್ನು ಹಾಕುತ್ತಾರೋ ನೋಡಿಕೊಂಡು ನಂತರ ನಿರ್ಧಾರ ಮಾಡುತ್ತೇವೆ. ಪರಸ್ಪರ ಸಹಕಾರ ಕೊಡಿ ಎಂದು ಅವರಲ್ಲಿ ಕೇಳುತ್ತೇವೆ. ಈ ಬಗ್ಗೆ ಕುಮಾರಸ್ವಾಮಿ ಅವರ ಜೊತೆ ಚರ್ಚೆ ಮಾಡುವುದಾಗಿ ಬಿಎಸ್ ವೈ ತಿಳಿಸಿದ್ದಾರೆ.
ಇನ್ನು ವಿಧಾನ ಪರಿಷತ್ ಚುನಾವಣೆ ಯಿಂದ ಎರಡನೇ ಸುತ್ತಿನ ಪ್ರಚಾರ ಶುರುವಾಗಿದೆ. ರಾಜ್ಯದಲ್ಲಿ ಕೇವಲ 20 ಸೀಟ್ ಗಳಿಗೆ ನಿಶ್ಚಿತವಾಗಿ ಸ್ಪರ್ಧೆ ಮಾಡುತ್ತೇವೆ ಇದರಲ್ಲಿ 15 ಸೀಟ್ ಗೆದ್ದೇ ಗೆಲ್ಲುತ್ತೇವೆ. ಎಲ್ಲಾ ಕಡೆ ಬಿಜೆಪಿ ಪರ ವಾತಾವರಣವಿದ್ದು, ವಿಧಾನ ಪರಿಷತ್ ನಲ್ಲಿ ಸ್ಪಷ್ಟ ಬಹುಮತ ಸಿಗಲಿದೆ ಎಂದರು.
PublicNext
24/11/2021 05:23 pm