ವಿಶೇಷ ವರದಿ: ಗಣೇಶ್ ಹೆಗಡೆ
ಬೆಂಗಳೂರು: ಬಿಬಿಎಂಪಿ ಚುನಾ ವಣೆ ಸಂಬಂಧ ಡಿ.6ರಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಅಂದೇ ಚುನಾವಣೆ ನಡೆಯಬೇಕೆ ಅಥವಾ ಮುಂದೂಡುವ ಬಗ್ಗೆ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ.
ಆದರೆ, ಬಿಜೆಪಿ ಬಿಬಿಎಂಪಿ ಚುನಾವಣೆ ಎದುರಿಸಲು ಹಿಂದೇಟು ಹಾಕ್ತಿದೆ. ಅಕಾಲಿಕ ಮಳೆಯಿಂದ ಉಂಟಾದ ಅನಾಹುತ, ಪ್ರವಾಹ, ರಾಜ ಕಾಲುವೆ ಒತ್ತುವರಿ ತೆರವಿಗೆ ಹಿಂದೇಟು ಮತ್ತು ಅವಘಡವನ್ನು ಬರಮಾಡಿಕೊಳ್ತಿರುವ ಸಾಲು - ಸಾಲು ರಸ್ತೆ ಗುಂಡಿಗಳು.
ಈ ಎಲ್ಲ ಸಮಸ್ಯೆಗಳು ಜನರ ಕೆಂಗಣ್ಣಿಗೆ ಗುರಿಯಾಗುವಂತೆ ಮಾಡಿದೆ. ಹೀಗಾಗಿ ಜನರ ಓಲೈಕೆಗೆ ಬಿಜೆಪಿ ಸರ್ಕಾರ ಮುಂದಾದಂತೆ ಕಾಣುತ್ತಿದೆ.ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಸಿಟಿ ರೌಂಡ್ಸ್, ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ ಎಂಬ ಮಾತು ಕೇಳಿ ಬರ್ತಿವೆ.
PublicNext
25/11/2021 12:51 pm