ಹುಬ್ಬಳ್ಳಿ: ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ ಜೊತೆ ಯಾವುದೇ ಹೊಂದಾಣಿಕೆ ರಾಜಕಾರಣ ಮಾಡ್ತಿಲ್ಲ.ಈ ಹಿಂದೆಯೂ ಕಾಂಗ್ರೆಸ್ ನಿಂದ ಒಂದೇ ಅಭ್ಯರ್ಥಿಯನ್ನು ಹಾಕಲಾಗಿತ್ತು. ಈ ಬಾರಿಯೂ ಪಕ್ಷ ಒಬ್ಬ ಅಭ್ಯರ್ಥಿಯನ್ನು ಅಖಾಡಕ್ಕಿಳಿಸಿದೆ. ಬಿಜೆಪಿಗೆ ಮತ ಕೇಳುವ ನೈತಿಕತೆಯಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸರ್ಕಾರದ ಜನವಿರೋಧಿ ನೀತಿಗೆ ಮತದಾರ ತಕ್ಕ ಉತ್ತರ ಕೊಡಲಿದ್ದಾನೆ. ನಾನು ಪ್ರಥಮ ಪ್ರಾಶಸ್ತ್ಯದ ಮತದೊಂದಿಗೆ ಗೆದ್ದು ಬರಲಿದ್ದೇನೆ. ಬಿಜೆಪಿ ಜೊತೆ ಯಾವುದೇ ಮಿಲಾಪಿ ಕುಸ್ತಿ ಇಲ್ಲ ಎಂದರು.
ರಾಜ್ಯ ಹಾಗೂ ದೇಶದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಜನಸಾಮಾನ್ಯರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
PublicNext
25/11/2021 01:43 pm