ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಗ್ಗೆ ಪಿಸುಮಾತಿನಲ್ಲಿ ವ್ಯಂಗ್ಯವಾಡಿದ ಕಾಂಗ್ರೆಸ್ ವಕ್ತಾರ ವಿ.ಎಸ್ ಉಗ್ರಪ್ಪ ಮೇಲೆ ಇನ್ನೂ ಯಾಕೆ ಕ್ರಮ ಕೈಗೊಂಡಿಲ್ಲ? ಎಂದು ಕೇಳುವ ಮೂಲಕ ಬಿಜೆಪಿ, ಕಾಂಗ್ರೆಸ್ ನಾಯಕರ ಕಾಲೆಳೆದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, "ಪರಿಷತ್ ಚುನಾವಣೆಯಲ್ಲಿ ಯಾರಾದರೂ ಬಂಡಾಯವಾಗಿ ಸ್ಪರ್ಧಿಸಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಕೆಶಿ ಎಚ್ಚರಿಸಿದ್ದಾರೆ. ಆದರೆ ಡಿಕೆಶಿ ತಕ್ಕಡಿ ಎದ್ದೇಳುತ್ತಿಲ್ಲ ಎಂದು ಕೆಪಿಸಿಸಿ ಕಚೇರಿಯಲ್ಲೇ ವ್ಯಂಗ್ಯವಾಡಿದ್ದ ಉಗ್ರಪ್ಪ ವಿರುದ್ಧ ಏಕೆ ಇನ್ನೂ ಕ್ರಮ ತೆಗೆದುಕೊಂಡಿಲ್ಲ? ಭಯವೋ, ಬೆದರಿಕೆಯೋ?" ಎಂದು ಪ್ರಶ್ನೆ ಮಾಡಿದೆ.
PublicNext
25/11/2021 07:20 pm